ಉಡುಪಿ: ತ್ರಿಶಾ ವಿದ್ಯಾ ಪಿ.ಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಳ ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಚರಿಸಲಾಯಿತು. ತ್ರಿಶಾ ವಿದ್ಯಾ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಂತ್ ಪೈ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಸಾಮರ್ಥ್ಯ ಬರುತ್ತದೆ ಹಾಗೂ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಇದ್ದಾಗ ಮಾತ್ರ ವಿದ್ಯಾರ್ಥಿಯ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ ಎ ಗೋಪಾಲಕೃಷ್ಣ ಭಟ್ ರವರು ಮಾತನಾಡಿ, ಈ ದಿನ ಮಾತ್ರವಲ್ಲ ವಿದ್ಯಾರ್ಥಿಗಳು ದಿನವೂ ಹೊಸತನ್ನು ಕಲಿಯಬೇಕು. ಈ ದಿನ ನಿಮ್ಮೆಲ್ಲರ ನಡುವಿನ ಬಾಂಧವ್ಯ ಹೆಚ್ಚಿಸಲಿ, ಉತ್ತಮ ವಿದ್ಯಾಭ್ಯಾಸ ನಿಮ್ಮದಾಗಲಿ ಎಂದು ಶುಭಹಾರೈಸಿದರು. ಕನ್ನಡ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಮಕ್ಕಳಿಗೆ ಐಸ್-ಬ್ರೇಕರ್ ಚಟುವಟಿಕೆ ನಡೆಸಿದರು ಇದಕ್ಕೆ ಪದವಿ ವಿದ್ಯಾರ್ಥಿಗಳು ಸಹಕರಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಿದ್ಧಾಂತ್ ಫೌಂಡೇಶನ್ ನ ಖಜಾಂಚಿಯಾದ ನಮಿತಾ ಜಿ ಭಟ್, ಕಾಲೇಜಿನ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಸರಿತಾ ಸ್ವಾಗತಿಸಿ, ವಂದಿಸಿದರು