Home » ಪ್ರಕೃತಿಯ ಮೂಲಕ ಆರೋಗ್ಯ ಮತ್ತು ಚಿಕಿತ್ಸೆ
 

ಪ್ರಕೃತಿಯ ಮೂಲಕ ಆರೋಗ್ಯ ಮತ್ತು ಚಿಕಿತ್ಸೆ

by Kundapur Xpress
Spread the love

ಕೋಟೇಶ್ವರ : ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಪ್ರಕೃತಿಯ ಮೂಲಕ ಆರೋಗ್ಯ ಮತ್ತು ಚಿಕಿತ್ಸೆ ಎಂಬ ವಿಷಯದ ಕುರಿತಂತೆ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರ ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕರಾದ ಡಾ. ನಿಶಾ ಕುಮಾರಿ ಭಾಗವಹಿಸಿ ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿಯ ಕೊಡುಗೆಗಳನ್ನು ವಿವರಿಸಿದರು. ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲಾಗುತ್ತಿರುವ ಪರಿಣಾಮಗಳ ಕುರಿತಾಗಿ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದÀ ರಾಮರಾಯ ಆಚಾರ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು., ಮಹಿಳಾ ವೇದಿಕೆಯ ಸಂಚಾಲಕರಾದ ರೋಹಿಣಿ ಉಪಸ್ಥಿತರಿದ್ದರು. ಪ್ರಥಮ ಬಿ.ಎ. ವಿದ್ಯಾರ್ಥಿನಿ ನಿಸರ್ಗ ಕಾರ್ಯಕ್ರಮ ನಿರ್ವಹಿಸಿದರು. ಅಂತಿಮ ಬಿ.ಎ. ಕೃತಿಕಾ ಇವರು ವಂದಿಸಿದರು.

 

Related Articles

error: Content is protected !!