ಕೋಟೇಶ್ವರ : )ಗುರುಕುಲ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಯೋಗ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ದೈಹಿಕ ಶಿಕ್ಷಕರ ಮಾರ್ಗದರ್ಶನದಲ್ಲಿ ಹತ್ತಕ್ಕೂ ಹೆಚ್ಚು ಭಂಗಿಯ ಯೋಗಗಳನ್ನು ಮಾಡುವ ಮೂಲಕ ಆರೋಗ್ಯಕರ ಬದುಕಿಗೆ ಯೋಗ ಎಷ್ಟು ಮುಖ್ಯ ಎಂಬುದನ್ನು ತಿಳಿಸಿದರು. ಶಾಲಾ ಆಟದ ಮೈದಾನದಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಭಂಗಿಯ ಯೋಗಗಳನ್ನು ಮಾಡುವ ಮೂಲಕ ವಿಶ್ವ ಯೋಗ ದಿನದ ಮಹತ್ವವನ್ನು ಅರಿತರು.ಯೋಗ ದಿನಾಚರಣೆಯ ಉದ್ದೇಶ ಮತ್ತು ಮಹತ್ವವನ್ನು ಕುಮಾರಿ. ವರ್ಣಿತಾ ವಿದ್ಯಾರ್ಥಿಗಳಿಗೆ ತಿಳಿಸಿದರು
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಜಂಟಿ ಕಾರ್ಯ ನಿರ್ವಾಹಕಿ ಶ್ರೀಮತಿ ಅನುಪಮಾ.ಎಸ್. ಶೆಟ್ಟಿ ಪ್ರಾಂಶುಪಾಲರಾದ ಶ್ರಿ.ಸುನಿಲ್ ಪ್ಯಾಟ್ರಿಕ್ , ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕುಮಾರಿ. ಚಂದನಾ ನಿರೂಪಿಸಿ ವಂದಿಸಿದರು.