ಕುಂದಾಪುರ : ಕೋಟೇಶ್ವರದ ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯಲ್ಲಿ77 ನೇ ಸ್ವಾತಂತ್ರ್ಯ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ ಮತ್ತು ಶ್ರೀಮತಿ ಅನುಪಮಾ ಶೆಟ್ಟಿ ಇವರು 77 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಾಲಾ ವಿದ್ಯಾರ್ಥಿಗಳ ವಿವಿಧ ತಂಡಗಳ ನಡುವೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ವಿವಿಧ ತಂಡಗಳ ವಿದ್ಯಾರ್ಥಿಗಳು ನೃತ್ಯಗಳು ಮತ್ತು ಹಾಡಿನ ಮೂಲಕ ತಮ್ಮಲ್ಲಿರುವ ದೇಶಭಕ್ತಿಯನ್ನು ಇನ್ನಷ್ಟು ಇಮ್ಮಡಿಗೊಳಿಸಿಕೊಂಡು,ಎಲ್ಲರ ಕಣ್ಮನಗಳನ್ನು ತಣಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ .ಮೋಹನ್. ಕೆ ,ಕಾಲೇಜು ಪ್ರಾಂಶುಪಾಲರಾದ ಶ್ರೀ. ಅವಿನಾಶ್, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿ ಸುಮಲತಾ ನಿರೂಪಿಸಿ ವಂದಿಸಿದರು
ಗುರುಕುಲ – ಸ್ವಾತಂತ್ರ್ಯ ದಿನಾಚರಣೆ
277
previous post
