ಕುಂದಾಪುರ :ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನವರ ಗುರುಕುಲ ಪಬ್ಲಿಕ್ ಸ್ಕೂಲ್ ನ 18 ನೇ ವಾರ್ಷಿಕೋತ್ಸವವು ಶ್ರೀ ಬಿ ಅಪ್ಪಣ್ಣ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರುಗಿತು ಮುಖ್ಯ ಅತಿಥಿಗಳಾಗಿ ಉಜಿರೆ ಎಸ್ ಡಿ ಎಂ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ರಾಜಶೇಖರ್ ರವರು ಮಾತನಾಡಿ ವಿದ್ಯಾರ್ಥಿಗಳ ಅಧ್ಯಯನದ ಜೊತಯಲ್ಲಿ ಮಾನವೀಯ ಮೌಲ್ಯಗಳ ಸಂಸ್ಕಾರಯುತ ಶಿಕ್ಷಣವು ಇಂದಿನ ದಿನದಲ್ಲಿ ಅಗತ್ಯ ಎಂದರು
ಸಮಾರಂಭದಲ್ಲಿ ಬಾಂಡ್ಯ ಎಜುಕೇಶನಲ್ ಟ್ರಸ್ಟ್ನ ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಅನುಪಮಾ ಎಸ್. ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಅವಿನಾಶ್ ಗುರುಕುಲ ಪಬ್ಲಿಕ್ ಸ್ಕೂಲ್ ಪ್ರಿನ್ಸಿಪಾಲ್ ಮೋಹನ್ ಕೆ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶ್ರೀಮಾನ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಹರ್ಷಿತಾ ಶೇಟ್ ಸ್ವಾಗತಿಸಿ ಫ್ರೆನಿಟಾ ಡಿಕೋಸ್ತ ಅತಿಥಿಗಳನ್ನು ಪರಿಚಯಿಸಿದರು ಸುಷ್ಮಾ ಎಸ್. ವಿಜೇತರ ಪಟ್ಟಿ ವಾಚಿಸಿದರು ಧವಳ್ ಎಸ್. ಶೆಟ್ಟಿ ವಂದಿಸಿದರು.