ಕುಂದಾಪುರ : ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಸಮಾರಂಭ ಗುರುನಮನ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಕಾಲೇಜಿನ ಬೋಧಕ, ಬೋಧಕೇತರ ವೃಂದದವರಿಗೆ ಶುಭ ಕೋರಿ ವಿದ್ಯಾರ್ಥಿ ಭವಿಷ್ಯವನ್ನು ರೂಪಿಸುವ ಶಿಕ್ಷಕ ವೃತ್ತಿ ಪವಿತ್ರವಾದದ್ದು ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕಂಬದಕೋಣೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ-ಶಿಕ್ಷಕರಾಗಿರುವ ಶ್ರೀಯುತ ವಿಶ್ವನಾಥ ಶೆಟ್ಟಿಯವರು ಮಾತನಾಡಿ ಶಿಕ್ಷಣ ಮತ್ತು ಸಂಸ್ಕಾರದ ಕುರಿತಾಗಿ ಸಾಕಷ್ಟು ಸ್ವಾರಸ್ಯಕರವಾಗಿರುವ ವಿಚಾರಗಳನ್ನು ಮನ ಮುಟ್ಟುವಂತೆ ತಿಳಿಸುತ್ತಾ ಜ್ಞಾನ ದಾಸೋಹ ನೀಡುತ್ತಿರುವ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಕುರಿತಾಗಿ ಶ್ಲಾಘನೆ ವ್ಯಕ್ತ ಪಡಿಸಿದರು.
ಅತಿಥಿಗಣ್ಯರು ಹಾಗೂ ಕಾಲೇಜಿನ ಬೋಧಕ,ಬೋಧಕೇತರ ವೃಂದದವರು ಡಾ|ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ್ ಪೂಜಾರಿ,ಬೋಧಕ ಬೋಧಕೇತರ ವೃಂದದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕ ಉದಯ್ ನಾಯ್ಕ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು.ವಿದ್ಯಾರ್ಥಿಗಳಾದ ಕೇದಾರ್ ಮರವಂತೆ ಪ್ರಾರ್ಥಿಸಿ,ಪ್ರತಿಕ್ಷಾ ಕಾರ್ಯಕ್ರಮ ನಿರೂಪಿಸಿ, ಗೌತಮ್ ವಂದಿಸಿದರು