ಕುಂದಾಪುರ : ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಏಳನೇ ದಿನದ ದೀಕ್ಷಾರಂಭ ಕಾರ್ಯಕ್ರಮದಲ್ಲಿ ಕಾಲೇಜಿನ ಸ್ಪೋರ್ಟ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ “ಕರಾಟೆಯ ಮೂಲಕ ಸ್ವಯಂ ರಕ್ಷಣೆ “ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು.ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಪ್ರಸಿದ್ಧ ಕರಾಟೆ ತರಬೇತಿ ಸಂಸ್ಥೆಯಾದ ‘ಡ್ರ್ಯಾಗನ್ ಫಿಸ್ಟ್ ಮಾರ್ಷಲ್ ಆರ್ಟ್ಸ್ ಆಫ್ ಇಂಡಿಯಾದ’ ಸಂಸ್ತಾಪಕರಾದ ಶ್ರೀ ಕಿರಣ್ ಮತ್ತು ತಂಡದ ಸದಸ್ಯರು ಕರಾಟೆ ಮತ್ತು ಸ್ವಯಂ ರಕ್ಷಣೆಯ ವಿದಾನವನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಮಾಡಿ ತೋರಿಸಿದರು, ಅಲ್ಲದೆ ಇಂದಿನ ದಿನಗಳಲ್ಲಿ ಸ್ವಯಂ ರಕ್ಷಣಾ ವಿದಾನ, ಕರಾಟೆಯ ಅವಶ್ಯಕತೆ ಮತ್ತು ಅದರ ಮಹತ್ವ, ಕರಾಟೆಯ ಸರಿಯಾದ ಕಲಿಕೆಯ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಕ್ರೀಡಾ ವೇದಿಕೆಯ ಸಂಯೋಜಕರು ಮತ್ತು ದೈಹಿಕ ಶಿಕ್ಷಕರಾದ ಶ್ರೀ ಪ್ರವೀಣ್ ಖಾರ್ವಿ ಉಪಸ್ಥಿತರಿದ್ದರು. ದ್ವಿತೀಯ ಬಿಬಿಎ ವಿದ್ಯಾರ್ಥಿ ಉಲ್ಲಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.