ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹೊಸ ಇಂಜಿನಿಯರಿಂಗ್ ಕೋರ್ಸ್ ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಅನ್ನು ಆರಂಭಿಸಲು ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಇಂದ ಅನುಮೋದನೆ ದೊರೆತಿದೆ. ಸಾಫ್ಟ್ವೇರ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಈ ಕೋರ್ಸ್ ನ್ನು ಆಯ್ಕೆ ಮಾಡುತ್ತಿರುವುದನ್ನು ಗಮನದಲ್ಲಿಟ್ಟು ಬೇಡಿಕೆ ಹೆಚ್ಚಿದ್ದರಿಂದ ಈ ವರ್ಷದಿಂದ ಹೊಸ ಕೋರ್ಸ್ ಅರಂಭಿಸುತ್ತಿದ್ದೇವೆ. ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂ ಅವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಸಂಬಂಧಪಟ್ಟ ಮೂರು ಕೋರ್ಸುಗಳು ಲಭ್ಯವಿದ್ದು, ಕಳೆದ ಬಾರಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯಲು ಸೀಟ್ಗಳು ಸಿಕ್ಕಿರಲಿಲ್ಲ. ಅದೇ ಕಾರಣ ಬಹು ಬೇಡಿಕೆಯ ಮತ್ತೊಂದು ಕೋರ್ಸ್ ಅನ್ನು ಆರಂಭಿಸುತ್ತಿದ್ದೇವೆ ಎಂದು ಕಾಲೇಜಿನ ಉಪ ಪ್ರಾಂಶುಪಾಲರು ಮತ್ತು ಅಡ್ಮಿಷನ್ ವಿಭಾಗದ ಮುಖ್ಯಸ್ಥ ಪ್ರೊ ಮೆಲ್ವಿನ್ ಡಿಸೋಜರವರು ತಿಳಿಸಿದ್ದಾರೆ. ಪ್ರವೇಶ ಬಯಸುವವರು ಕಾಲೇಜಿನ ಕಚೇರಿಗೆ ಸಂಪರ್ಕಿಸಬಹುದು.