Home » ಯುವ ನಾಯಕತ್ವ ಅನ್ವೇಷಣ ಸ್ಪರ್ಧೆ
 

ಯುವ ನಾಯಕತ್ವ ಅನ್ವೇಷಣ ಸ್ಪರ್ಧೆ

by Kundapur Xpress
Spread the love

ಕುಂದಾಪುರ :  ಐ ಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಕಾಲೇಜು ಮೂಡ್ಲಕಟ್ಟೆ  ಇದರ ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ” ಜಸ್ಟ್ ಆ ಮಿನಿಟ್ (JAM)-ಯುವ ನಾಯಕತ್ವ ಅನ್ವೇಷಣ ಸ್ಪರ್ಧೆ ”  ಪ್ರಥಮ ಬಿ ಸಿ ಎ ಪದವಿ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಯಿತು . ಈ ಕಾರ್ಯಕ್ರಮವನ್ನು ಐಎಂಜೆ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ ಇವರು ನಡೆಸಿಕೊಟ್ಟರು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಈ ಸಂದರ್ಭದಲ್ಲಿ ಡಾಕ್ಟರ್ ರಾಮಕೃಷ್ಣ ಹೆಗಡೆ ಅವರು ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗೂ ಅವರ ಮುಂದಿನ ವೃತ್ತಿ ಜೀವನದಲ್ಲಿ ಸಂವಹನ ಕೌಶಲ್ಯದ ಪ್ರಾಮುಖ್ಯತೆಯನ್ನು ವಿವರಿಸಿದರು.

ಎಂಬಿಎ ವಿಭಾಗದ ಪ್ರೊಫೆಸರ್ ವೆಂಕಟೇಶ್ ಶೆಟ್ಟಿ ಹಾಗೂ ಪದವಿ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕಿಯಾದ ಪ್ರೊಫೆಸರ್ ಪಾವನ ರವರು ಸ್ಪರ್ಧೆಯ ತೀರ್ಪುಗಾರರಾಗಿದ್ದರು. ಉಪ ಪ್ರಾಂಶುಪಾಲರಾದ ಪ್ರೊಫೆಸರ್ ಜಯಶೀಲ್ ಕುಮಾರ್ ಅವರು ಈ ಸಂದರ್ಭದಲ್ಲಿ ಮಾತನಾಡುತ್ತಾ ವಿದ್ಯಾರ್ಥಿಗಳು ಬಂದ ಅವಕಾಶಗಳನ್ನು ಸಕ್ರಿಯವಾಗಿ ಬಳಸಿಕೊಂಡು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು. ಪ್ರಥಮ ಬಿ ಸಿ ಎ ವಿದ್ಯಾರ್ಥಿನಿಯರಾದ ಕುಮಾರಿ ಸಿಂಚನ ಶೆಟ್ಟಿ , ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕುಮಾರಿ ರಶಿತ ಇವರು ದ್ವಿತೀಯ ಸ್ಥಾನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು

   

Related Articles

error: Content is protected !!