Home » ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
 

ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

by Kundapur Xpress
Spread the love

ಕುಂದಾಪುರ : ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ  ಇಲ್ಲಿನ ಎಂ ಬಿ ಎ ಮತ್ತು ಎಂ ಸಿ ಎ ಪದವಿಗಾಗಿ ನೂತನವಾಗಿ ಸೇರ್ಪಡೆ ಆದ  ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು  ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಕುರಿತಾಗಿ ಮಾರ್ಗದರ್ಶನ ನೀಡಿದರು .
ಕಾರ್ಯಕ್ರಮದಲ್ಲಿ ಎಂ ಬಿ ಎ ವಿಭಾಗದ ಮುಖ್ಯಸ್ತೆ ಡಾ. ಸುಚಿತ್ರಾ ಪೂಜಾರಿ ಮತ್ತು ಎಂ ಸಿ ಎ ವಿಭಾಗದ ಮುಖ್ಯಸ್ತೆ ಡಾ. ನಂದಿನಿ  ಹಾಗೂ ಎರಡು ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು

ಮದ್ಯಾಹ್ನ ಉಪಹಾರ ಸೇವಿಸಿದ ನಂತರ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು , ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ರಶ್ಮಿತ ಮತ್ತು ಪ್ರಿಯಾಂಕಾ ಶ್ರೀಧರ್ ಇವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು

 

Related Articles

error: Content is protected !!