ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗವು ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳೊಂದಿಗೆ ಜೂನ್ 06ರಂದು ಬ್ರಹ್ಮಾವರದ ಉಪ್ಪೂರಿನ ಕೆ.ಎಮ್.ಎಫ್. ನಂದಿನಿ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಲಾಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಮತ್ತು ತರಬೇತಿಗಳನ್ನು ನೀಡಲಾಯಿತು.ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರಜತ್ ಬಂಗೇರ, ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.