ಹೆಮ್ಮಾಡಿ ; ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜನತಾ ದಿಬ್ಬಣ 2024 ಪ್ರತಿಭಾ ದಿನಾಚರಣೆ ಕಾರ್ಯಕ್ರಮವು ಕುಂದಾಪುರದ ಮೊಗವೀರ ಭವನದಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ, ಅಂತರಾಷ್ಟ್ರೀಯ ಜಾದುಗಾರರು,ಸಾಹಿತಿಗಳು,ನಟ ನಿರ್ದೇಶಕರು ಆದ ಶ್ರೀಯುತ ಓಂ ಗಣೇಶ್ ಉಪ್ಪುಂದರವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ ಜನತಾ ಕಾಲೇಜು ವಿದ್ಯಾರ್ಥಿ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ಜಗ ಮೆಚ್ಚುವಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೀರಿ ಪ್ರತಿಭೆಗೆ ಪ್ರೋತ್ಸಾಹ ಕೊಡುವ ನಿಮ್ಮ ಕಾಯಕ ಮಹತ್ತರವಾದದ್ದು, ಗುಣಮಟ್ಟದ ಶಿಕ್ಷಣಕ್ಕಾಗಿ ವಿವಿಧ ರಾಜ್ಯಗಳಿಂದ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ ಮುಂದಿನ ವರ್ಷಗಳಲ್ಲಿ ಬೇರೆ ಬೇರೆ ದೇಶಗಳಿಂದ ವಿದ್ಯಾರ್ಥಿಗಳು ಬರಲಿ ಎಂದು ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಜನತಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಮಾತನಾಡಿ ‘ದಿಬ್ಬಣ’ ಎಂಬ ಅರ್ಥಪೂರ್ಣ ಶೀರ್ಷಿಕೆಯ ಪ್ರತಿಭಾ ದಿನಾಚರಣೆಯ ಈ ಕಾರ್ಯಕ್ರಮವು,ನಿರಂತರ ಪಾಠ ಪ್ರವಚನಗಳಿಂದ ನಾಲ್ಕು ಗೋಡೆಗಳ ಮಧ್ಯದಲ್ಲಿ ಮಿಂದೇಳುವ ಮನಸ್ಸುಗಳಿಗೆ ಅದರ ಆಚೆಗೂ ಅದನ್ನು ಪಸರಿಸಬೇಕು ಎನ್ನುವ ಉದ್ದೇಶದಿಂದ ವಿದ್ಯಾರ್ಥಿ ಪ್ರತಿಭೆಗಳಿಗೆ ವೇದಿಕೆ ಕಲ್ಪಸಿ,ಅಂತಹ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕಾರ್ಯಕ್ರಮದ ಆಯೋಜನೆ ಮಾಡಿದ್ದೇವೆ ಎಂದು ಶುಭ ಹಾರೈಸಿದರು.
ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ಚಲನಚಿತ್ರ ಹಿನ್ನಲೆ ಗಾಯಕಿ ವಿಜಯಲಕ್ಷ್ಮಿ ಮೆಟ್ಟಿನಹೊಳೆಯವರು ಮಾತನಾಡಿ,ವಿದ್ಯಾರ್ಥಿ ಪ್ರತಿಭೆಗಳಿಗೆ ಜನತಾ ಕಾಲೇಜು ಕೊಡುತ್ತಿರುವ ಪ್ರೋತ್ಸಾಹದ ಬಗ್ಗೆ ಸಾಕಷ್ಟು ಹೆಮ್ಮೆ ಇದೆ. ಶಿಕ್ಷಣದಲ್ಲಿ ಎಲ್ಲವನ್ನೂ ನೀಡಲು ಸಾಧ್ಯವಿದೆ ಎನ್ನುವುದಕ್ಕೆ ಜನತಾ ಉದಾಹರಣೆ ಎನ್ನುತ್ತಾ, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರತಿಭೆಗಳು ನಿಮ್ಮ ಕಾಲೇಜಿನಲ್ಲಿ ಹುಟ್ಟಿ ದೇಶ-ವಿದೇಶದಲ್ಲಿ ಪಸರಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರ,ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿ,ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ಕು| ದೀಪಿಕಾ ಆಚಾರ್ಯ ಕಾಲೇಜಿನ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿ ವೃಂದದವರು, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.6 ತಂಡಗಳ ಪ್ರತಿಭಾ ಪ್ರದರ್ಶನ ಅತ್ಯಂತ ವೈಭವಯುತವಾಗಿ ನಡೆಯಿತು ಪ್ರತಿಭಾ ಪ್ರೋತ್ಸಾಹಕ್ಕಾಗಿ ವಿಜೇತ ತಂಡಗಳಿಗೆ ಹಾಗೂ ಅತ್ಯುತ್ತಮ ಪ್ರತಿಭಾ ಆಯ್ಕೆಗಳಿಗಾಗಿ ಆಕರ್ಷಕವಾದ ಫಲಕ,ಪ್ರಮಾಣಪತ್ರ, ಹಾಗೂ ವಿಶೇಷವಾದ ಪದಕಗಳನ್ನು ನೀಡಿ ಗೌರವಿಸಲಾಯಿತು.ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿ,ಉಪನ್ಯಾಸಕರಾದ ಶ್ರೀ ಉದಯ ನಾಯ್ಕ ನಿರೂಪಿಸಿ,ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿ ವಂದಿಸಿದರು.