Home » ಜಯರಾಣಿ ಶಾಲೆಯಲ್ಲಿ ಸಂಭ್ರಮದ ವಿಶ್ವ ಪರಿಸರ ದಿನಾಚರಣೆ
 

ಜಯರಾಣಿ ಶಾಲೆಯಲ್ಲಿ ಸಂಭ್ರಮದ ವಿಶ್ವ ಪರಿಸರ ದಿನಾಚರಣೆ

by Kundapur Xpress
Spread the love

ತಲ್ಲೂರು : ಜಯರಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕುಂದಾಪುರ ಅರಣ್ಯ ಇಲಾಖೆಯ ರೇಂಜರ್ ಶ್ರೀಮತಿ ತುಳಸಿ ಅವರು ಆಗಮಿಸಿ, ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಪ್ರತಿಯೊಬ್ಬರ ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಪರಿಸರವನ್ನು ಉಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಅಲ್ವಿನಾ ಅವರು ಅತಿಥಿಗಳನ್ನು ಸ್ವಾಗತಿಸಿ, ಪರಿಸರ ಸಂರಕ್ಷಣೆಯ ಕುರಿತು ತಮ್ಮ ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಗಳು ಪರಿಸರ ಜಾಗೃತಿ ಕುರಿತ ನೃತ್ಯವನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಏಳನೇ ತರಗತಿಯ ವಿದ್ಯಾರ್ಥಿಗಳು ಸ್ವಾಗತ ಗೀತೆಯನ್ನು ಪ್ರಸ್ತುತಪಡಿಸಿದರು.
ಬಳಿಕ ಅತಿಥಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ನಂತರ ವಿದ್ಯಾರ್ಥಿಗಳು ಪರಿಸರ ಜಾಗೃತಿ ಕುರಿತ ಘೋಷಣೆಗಳೊಂದಿಗೆ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

 

Related Articles

error: Content is protected !!