ಕೋಟೇಶ್ವರ : ಕಂಪನಿ ಸೆಕ್ರೆಟರಿ ಶಿಕ್ಷಣವು ಭಾರತದ ಅತ್ಯಂತ ಬೇಡಿಕೆಯಲ್ಲಿ ಇರುವ ವೃತ್ತಿಪರ ಉನ್ನತ ಶಿಕ್ಷಣದ ಅವಕಾಶವಾಗಿದೆ. ಕಂಪನಿ ಸೆಕ್ರೆಟರಿ ಕ್ಷೇತ್ರ ಕಂಪನಿಗಳ ಕಾನೂನು ಮತ್ತು ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಉನ್ನತ ಶಿಕ್ಷಣ ಉನ್ನತ ಮಟ್ಟದ ಉದ್ಯೋಗ ಮತ್ತು ಜೀವನ ನಿರ್ಮಿಸುವ ಅವಕಾಶ ಸೃಷ್ಟಿಸುತ್ತದೆ. ಕಂಪನಿ ಸೆಕ್ರೆಟರಿ ವೃತ್ತಿಪರ ಉನ್ನತ ಶಿಕ್ಷಣದ ಅವಕಾಶವಾಗಿದ್ದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಉಡುಪಿಯ ಕಂಪನಿ ಸೆಕ್ರೆಟರಿ ಶ್ರೀ ಸಿ.ಎಸ್ ಸಂತೋಷ್ ಪ್ರಭು ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರದ ವಾಣಿಜ್ಯಶಾಸ್ತç ಮತ್ತು ನಿರ್ವಹಣಾಶಾಸ್ತç ಸಂಘ ಆಯೋಜಿಸಿದ್ದ ಕಂಪನಿ ಸೆಕ್ರೆಟರಿ ಕೋರ್ಸ್ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಹತ್ವ ಮತ್ತು ಕಂಪನಿ ಸೆಕ್ರೆಟರಿ ಶಿಕ್ಷಣದ ಮಹತ್ವ ವಿವರಿಸಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಶ್ರೀ ರಾಮರಾಯ ಆಚಾರ್ಯ ಮತ್ತು ಐಕ್ಯೂಎಸಿ ಸಂಚಾಲಕ ಶ್ರೀ ನಾಗರಾಜ ಯು ಉಪಸ್ಥಿತರಿದ್ದರು. ವಾಣಿಜ್ಯಶಾಸ್ತç ವಿಭಾಗ ಮುಖ್ಯಸ್ಥ ಡಾ. ಶೇಖರ್ ಬಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿ ಶ್ವೇತಾ ಕಾರ್ಯಕ್ರಮ ನಿರ್ವಹಿಸಿ ವಂದನಾ ವಂದಿಸಿದರು.