ಕೋಟೇಶ್ವರ : ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಕ್ಷಕ-ಶಿಕ್ಷಕ ಸಂಘದ ಸಭೆ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು ಸಭೆಯ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ ಅವರು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೋಷಕರ ಪಾತ್ರ ಬಹು ಮಖ್ಯವಾಗಿದೆ ಎಂದು ಸಭೆಯನ್ನುದ್ದೇಶಿಸಿ ನುಡಿದರು. ರಕ್ಷಕ-ಶಿಕ್ಷಕ ಸಂಘದ ಸಂಚಾಲಕರಾದ ಡಾ. ಶೇಖರ ಬಿ. ಮುಖ್ಯಸ್ಥರು ವಾಣಿಜ್ಯಶಾಸ್ತ್ರ ವಿಭಾಗ ಇವರು ಎಲ್ಲಾ ಪೋಷಕರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. 2023-24 ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಎಲ್ಲಾ ತರಗತಿವಾರು ಪೋಷಕ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಶ್ರೀ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಶ್ರೀ ರಾಮರಾಯ ಆಚಾರ್ಯ ಉಪಸ್ಥಿತರಿದ್ದರು. ಡಾ. ವೆಂಕಟರಾಮ ಭಟ್ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರು ಇವರು ಕಾರ್ಯಕ್ರಮವನ್ನು ನಿರ್ವಹಿಸಿ, ಅಂತಿಮ ಬಿ.ಕಾಂ. ವಿದ್ಯಾರ್ಥಿಗಳು ಪ್ರಾರ್ಥಿಸಿದರು