ಕೋಟೇಶ್ವರ : ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಕುಟುಂಬ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಉತ್ತಮ ಆರೋಗ್ಯ ಉತ್ತಮ ಜೀವನಶೈಲಿಯಿಂದ ಮಾತ್ರ ಗಳಿಸಲು ಸಾಧ್ಯ. ಅನಗತ್ಯವಾದ ವಿಚಾರ ವಿಹಾರ ಮನೆ ಮನಗಳನ್ನು ಹಾಳುಮಾಡುತ್ತಿದೆ. ಭಾರತೀಯ ಜೀವನ ಪಧ್ಧತಿ ಶ್ರೇಷ್ಠ ಮತ್ತು ಅದನ್ನು ಯುವ ಜನತೆ ಅರಿತುಕೊಳ್ಳಬೇಕು. ನಮ್ಮ ಸಂಸ್ಕೃತಿಯ ಉಳಿವಿನಲ್ಲಿ ಮಹಿಳೆಯ ಪಾತ್ರ ದೊಡ್ಡದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ ಹೇಳಿದರು. ಅವರು ಕೋಟೇಶ್ವರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಇಲ್ಲಿನ ರೆಡ್ ಕ್ರಾಸ್ ಘಟಕ ಮತ್ತು ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ ಮಹಿಳೆ ಮತ್ತು ಸಮುದಾಯ ಅಭಿವೃದ್ಧಿ ಕುರಿತ ಒಂದು ದಿನದ ವಿಚಾರ ಸಂಕಿರಣದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಕೋಟೇಶ್ವರ ವಲಯದ ಮೇಲ್ವಿಚಾರಕಿ ಶ್ರೀಮತಿ ವೇದಾವತಿ ವಿಚಾರಸಂಕಿರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್ ನಾಯಕ ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಕುರಿತು ವಿಚಾರಗಳನ್ನು ವಿವರಿಸಿದರು. ಐಕ್ಯೂಎಸಿ ಸಂಚಾಲಕ ಶ್ರೀ ನಾಗರಾಜ ಯು, ರೆಡ್ ಕ್ರಾಸ್ ಸಂಚಾಲಕ ಡಾ. ಶೇಖರ್ ಬಿ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಾಮರಾಯ ಆಚಾರ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಡಾ. ವೆಂಕಟರಾಮ ಭಟ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಜಾಹ್ನವಿ ಮತ್ತು ತಂಡ ಪ್ರಾರ್ಥಿಸಿ, ಮಹಿಳಾ ವೇದಿಕೆಯ ಸಂಚಾಲಕರಾದ ಡಾ. ಭಾಗೀರಥಿ ನಾಯ್ಕ ವಂದಿಸಿದರು. ಉಪನ್ಯಾಸಕಿ ಕುಮಾರಿ ವಸುಧಾ ಕಾರ್ಯಕ್ರಮ ನಿರ್ವಹಿಸಿದರು.