ಕುಂದಾಪುರ : ಬಸ್ರೂರು ಶ್ರೀ ಶಾರದಾ ಕಾಲೇಜಿನ ಮಹಿಳಾ ವೇದಿಕೆಯ ಆಶ್ರಯದಲ್ಲಿ “ಪ್ರಸ್ತುತ ಸಮಾಜದಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಕಾನೂನು” ಎಂಬ ವಿಷಯದ ಮೇಲೆ ಕಾನೂನು ಅರಿವು ಕಾರ್ಯಕ್ರಮ ಕಾಲೇಜಿನ ವೀರ ರಾಜೆಂದ್ರ ಹೆಗ್ಡೆ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಪನ್ಮೂಲ ವ್ಯಕ್ತಿಗಳಾದ ಕುಂದಾಪುರದ ಖ್ಯಾತ ಹಿರಿಯ ನ್ಯಾಯವಾದಿಗಳಾದ ಶ್ರೀಮತಿ ಶ್ಯಾಮಲ ಭಂಡಾರಿ ಕಾರ್ಯಕ್ರಮವನ್ನುದ್ದೇಶಿಸಿ ಪ್ರತಿಯೊಬ್ಬ ಮಹಿಳೆಗೂ ಬದುಕುವ ಹಕ್ಕಿದೆ ಮತ್ತು ಮುಕ್ತವಾಗಿ ತನ್ನನ್ನು ತಾನು ವ್ಯಕ್ತಪಡಿಸಿಕೊಳ್ಳುವ ಹಕ್ಕುಗಳಿದ್ದರೂ ವರದಕ್ಷಿಣೆ ಕಿರುಕುಳ, ಅತ್ಯಾಚಾರ ಮೊದಲಾದ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದು ಮಹಿಳೆಯರು ತಮ್ಮನ್ನು ರಕ್ಷಿಸಿಕೊಳ್ಳಲು ಯಾವ ಕಾನೂನುಗಳಿವೆ ಎಂಬ ಅರಿವು ಇದ್ದಾಗ ಮಾತ್ರ ನಿಜವಾದ ಸುಸಂಸ್ಕ್ರತವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎನ್ನುತ್ತಾ ಇಂದಿನ ಅಂತರ್ಜಾಲ ಬಳಕೆಯಿಂದ ಸೈಬರ್ ಅಪರಾಧಗಳ ಬಗ್ಗೆ ಜಾಗ್ರತರಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಮಹಿಳಾ ವೇದಿಕೆ ಸಂಯೋಜಕಿಯಾದ ಪ್ರಮಿಳಾ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿ ಅನುಷ್ಕಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸ್ವಪ್ನಾ ಧನ್ಯವಾದಗೈದರು.