ಕುಂದಾಪುರ : ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮವು ಎಂ ಐ ಟಿ ಕಾಲೇಜಿನಲ್ಲಿ ನಡೆಯಿತು ಪ್ರವೀಣ್ ಕ್ಯಾಸ್ಟೆಲಿನೊ, ಸಹ-ಸಂಸ್ಥಾಪಕರು ಮತ್ತು ಸಿಟಿಒ-ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈ.ಲಿ., ಬೆಂಗಳೂರು ಇವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಕೌಶಲಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ಸಹಾಯ ಮಾಡುತ್ತದೆ. ಇಂಜಿನಿಯರಿಂಗ್ ಶಿಕ್ಷಣದ ಮೂಲ ಪರಿಕಲ್ಪನೆಗಳು ಮತ್ತು ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳನ್ನು ಅರ್ಥಮಾಡಿಕೊಳ್ಳಲು 3 ರಿಂದ 4 ವರ್ಷಗಳ ಕಠಿಣ ಪರಿಶ್ರಮವನ್ನು ಮಾಡಲು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು,
ಈ ಪರಿಶ್ರಮ ನಿಮ್ಮ ಮುಂದಿನ ವೃತ್ತಿಪರ ಜೀವನದ 3 ರಿಂದ 4 ದಶಕಗಳಿಗೆ ಸಹಾಯ ಮಾಡುತ್ತದೆ ಎಂದು ವಿವರವಾಗಿ ಹೇಳಿದರು. ಕಾಲೇಜಿನ ಸಂಸ್ಥಾಪಕರಾದ ದಿವಂಗತ ಶ್ರೀ ಐ.ಎಂ.ಜಯರಾಮ ಶೆಟ್ಟಿಯವರ ದೂರದೃಷ್ಟಿ ಮತ್ತು ಪ್ರಸ್ತುತ ಅಧ್ಯಕ್ಷರಾದ ಶ್ರೀ ಸಿದ್ದಾರ್ಥ ಜೆ ಶೆಟ್ಟಿ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಇಂಜಿನಿಯರಿಂಗ್ ಶಿಕ್ಷಣವನ್ನು ನೀಡಲು ಮಾಡುತ್ತಿರುವ ಪ್ರಯತ್ನದ ಕುರಿತು ಪ್ರಾಂಶುಪಾಲರಾದ ಡಾ.ಅಬ್ದುಲ್ ಕರೀಂ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಆಡಳಿತ ಮಂಡಳಿ ಮತ್ತು ಅಧ್ಯಾಪಕರು ನೀಡುವ ಅಪಾರ ಬೆಂಬಲದ ಬಗ್ಗೆಯೂ ತಿಳಿಸಿದರು.