ಕುಂದಾಪುರ : ಕುಂದಾಪುರದ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಕಾಲೇಜು ಮೂಡ್ಲಕಟ್ಟೆಯಲ್ಲಿ ಪ್ರಥಮ ಬಿಸಿಎ ಪದವಿ ವರ್ಷದ ವಿದ್ಯಾರ್ಥಿಗಳಿಗೆ ಐಟಿ ಫೋರಮ್ ವೇದಿಕೆಯ ಅಡಿಯಲ್ಲಿ “ಗುಡ್ ಪ್ರಾಕ್ಟೀಸ್ ಇನ್ ಸಿ ಲ್ಯಾಂಗ್ವೇಜ್ ” ವಿಷಯದ ಕುರಿತು ಕಾರ್ಯಾಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಯುತ ಮುರಳಿಧರ. ಬಿಕೆ ಸೀನಿಯರ್ ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥರು ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಓಫ್ ಟೆಕ್ನಾಲಜಿ ಕುಂದಾಪುರ ಇವರು ವಿಷಯದ ಕುರಿತು ಮಾತನಾಡಿದರು. ಕಾರ್ಯಾಗಾರದಲ್ಲಿ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್ ಅಲ್ಲಿ ಬೇಸಿಕ್ಸ್ ಓಫ್ ಸಿ ಪ್ರೋಗ್ರಾಮಿಂಗ್ ಮತ್ತು ಪಾಯಿಂಟರ್ಸ್ ಮತ್ತು ಸ್ಟ್ರೈಕ್ಚರ್ ಓಫ್ ಸಿ ಪ್ರೋಗ್ರಾಮಿಂಗ್ ಹೇಗೆ ಉಪಯೋಗ ಮಾಡಬಹುದು ಎನ್ನುವುದರ ಕುರಿತು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಸ್ವರ್ಣರಾಣಿ ಅವರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.ಪ್ರಥಮ ಬಿಸಿಎ ವಿದ್ಯಾರ್ಥಿನಿ ಕುಮಾರಿ ಸಿಂಚನ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು