Home » ಎಂ ಐ ಟಿ ಕೆ ಯಲ್ಲಿ ಬಜೆಟ್ ವಿಶ್ಲೇಷಣೆ
 

ಎಂ ಐ ಟಿ ಕೆ ಯಲ್ಲಿ ಬಜೆಟ್ ವಿಶ್ಲೇಷಣೆ

by Kundapur Xpress
Spread the love

ಕುಂದಾಪುರ : ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಇಲ್ಲಿನ ಡಿಪಾರ್ಟ್ಮೆಂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ (MBA) ವತಿಯಿಂದ ಕಾಲೇಜಿನಲ್ಲಿ “ಬಜೆಟ್ ವಿಶ್ಲೇಷಣೆ–2026” ಕುರಿತ ಸ್ಪರ್ಧೆಯನ್ನು ಎಂ ಬಿ ಎ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಉಪಸ್ಥಿತರಿದ್ದು, ಸ್ಪರ್ಧೆಗೆ ಶುಭ ಹಾರೈಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಜ್ಞಾನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ಅವರು ತಿಳಿಸಿದರು.

ಈ ಸ್ಪರ್ಧೆಯ ಉದ್ದೇಶ ವಿದ್ಯಾರ್ಥಿಗಳಿಗೆ ಕೇಂದ್ರ ಬಜೆಟ್ 2026 ಕುರಿತು ಆಳವಾದ ಅರಿವು ಮೂಡಿಸುವುದಾಗಿದ್ದು, ವಿದ್ಯಾರ್ಥಿಗಳು ಬಜೆಟ್‌ನ ಆದಾಯ–ವೆಚ್ಚ ವಿನ್ಯಾಸ, ವಿವಿಧ ಕ್ಷೇತ್ರಗಳಿಗೆ ನೀಡಿರುವ ಅನುದಾನ ಹಾಗೂ ಆರ್ಥಿಕ ಪರಿಣಾಮಗಳ ಕುರಿತು ಪ್ರೆಸೆಂಟೇಷನ್ ನೀಡಿದರು.

ಸ್ಪರ್ಧೆಯ ಮೌಲ್ಯಮಾಪನವನ್ನು ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಡಾ. ಸುಬ್ರಹ್ಮಣ್ಯ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೋಟಾ. ಅವರು ನೆರವೇರಿಸಿದರು. ಅವರು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ದೃಷ್ಟಿಕೋನ ಮತ್ತು ಪ್ರೆಸೆಂಟೇಶನ್ ಕೌಶಲ್ಯವನ್ನು ಮೆಚ್ಚಿ, ಉಪಯುಕ್ತ ಸಲಹೆಗಳನ್ನು ನೀಡಿದರು. ಜೊತೆಗೆ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪರಿಚರಣ್ ಅವರು ಆಂತರಿಕ ಮೌಲ್ಯಮಾಪಕರಾಗಿ ಕಾರ್ಯನಿರ್ವಹಿಸಿದರು.

ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ವಿಜೇತ ಮತ್ತು ರನ್ನರ್‌ಅಪ್ ಬಹುಮಾನ, ನಗದು ಬಹುಮಾನ ಹಾಗೂ ಟ್ರೋಫಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ಅದಿತಿ ಅವರು ಸಮರ್ಥವಾಗಿ ನಿರ್ವಹಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ಶ್ವೇತಾ ಅವರು ವಂದಿಸಿದರು.

ವಿದ್ಯಾರ್ಥಿಗಳು ಹಾಗೂ ಬೋಧಕ ವೃಂದದ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

 

Related Articles

error: Content is protected !!