Home » ಹೊಸತನದ ಅನ್ವೇಷಣೆಗೆ ಹಳೆದಾದ ಸಂಗತಿಗಳನ್ನು ಜೋಡಿಸಲು ಪ್ರಯತ್ನಿಸಿ ಡಾ.ಶಿವಾನಂದ ಹೆಗ್ಡೆ ಕೆರೆಮನೆ
 

ಹೊಸತನದ ಅನ್ವೇಷಣೆಗೆ ಹಳೆದಾದ ಸಂಗತಿಗಳನ್ನು ಜೋಡಿಸಲು ಪ್ರಯತ್ನಿಸಿ ಡಾ.ಶಿವಾನಂದ ಹೆಗ್ಡೆ ಕೆರೆಮನೆ

by Kundapur Xpress
Spread the love

ಮೂಡ್ಲಕಟ್ಟೆ : ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ(MIT) ರಾಷ್ಟ್ರಮಟ್ಟದ ಅಂತರ್ ಕಾಲೇಜು ತಾಂತ್ರಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಹಬ್ಬ ‘ಸಾವಿಷ್ಕರ್-2026’ ಕ್ಕೆ ಗುರುವಾರ ಚಾಲನೆ ನೀಡಲಾಯಿತು.
​ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಯಕ್ಷಗಾನ ಕಲಾವಿದರಾದ ಡಾ. ಶಿವಾನಂದ ಹೆಗಡೆ ಕೆರೆಮನೆ ಅವರು, “ತಂತ್ರಜ್ಞಾನದ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯ. ಕಲೆ,ತಂತ್ರಜ್ಞಾನ. ಹಾಗೂ ಕ್ರೀಡಾ ಸಮ್ಮಿಲನವೇ ಜೀವನದ ನಿಜವಾದ ಸಂಭ್ರಮ, ಹಳ್ಳಿಯಲ್ಲಿ ಮೂಡಿಬಂದ ಈ ಸಂಸ್ಥೆ ಜಗತ್ತಿಗೆ ಮಾದರಿಯಾಗುವುದರಲ್ಲಿ ಅನುಮಾನವಿಲ್ಲ.” ಎಂದು ತಿಳಿಸಿದರು.
​ಐ.ಎಂ.ಜೆ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ಇಂತಹ ರಾಷ್ಟ್ರಮಟ್ಟದ ವೇದಿಕೆಗಳು ಸಹಕಾರಿ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾಲೇಜು ನಡೆದು ಬಂದ ಹಾದಿಯನ್ನು ವಿವರಿಸಿದರು.
​ಐ.ಎಂ.ಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಸಿದ್ದಾರ್ಥ ಜೆ. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಹಲವಾರು ಕಾಲೇಜುಗಳ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದ ನಂತರ ವಿವಿಧ ಸಾಂಸ್ಕೃತಿಕ , ತಾಂತ್ರಿಕ ಸ್ಪರ್ಧೆಗಳು ಹಾಗೂ ಕ್ರೀಡಾಕೂಟಗಳು ಆರಂಭಗೊಂಡವು.
​ಕಾರ್ಯಕ್ರಮದಲ್ಲಿ ಸಾವಿಷ್ಕಾರ್ ಪ್ರಮುಖ ಸಂಯೋಜಕರಾದ ಡಾ ವರುಣ್ ಕುಮಾರ್, ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ಟುಡೆಂಟ್ ವೆಲ್ಫ಼ೇರ್ ಡೀನ್ ಅಕ್ಷತ ನಾಯಕ್ ಸ್ವಾಗತಿಸಿ, ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ ಪ್ರೊ.ಸೂಕ್ಷ್ಮ ಅಡಿಗ ವಂದಿಸಿದರು. ವಿದ್ಯಾರ್ಥಿನಿ ಎಲಿಷಾ ಬಿಷಪ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಐ ಕ್ಯೂ ಎ ಸಿ ಹೆಡ್ ಡಾ.ನಿಖಿಲ ಪೈ ಕಾರ್ಯಕ್ರಮವನ್ನು ಸಂಯೋಜಿಸಿದರು.

 

Related Articles

error: Content is protected !!