ಕೋಟ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಸಂಪನ್ಮೂಲ ಕೇಂದ್ರ ಬ್ರಹ್ಮಾವರ ವಲಯ ಮತ್ತು ಸಂಯುಕ್ತ ಪ್ರೌಢಶಾಲೆ ಮಣೂರು ಪಡುಕರೆ ಸಹಭಾಗಿತ್ವದಡಿ ಕಾರ್ಕಡ ಕ್ಲಸ್ಟರ್ ಮಟ್ಟದ 2024-25ನೇ ಸಾಲಿನ ಪ್ರತಿಭಾ ಕಾರಂಜಿ ಕಾರ್ಯಕ್ರಮ ಶುಕ್ರವಾರ ಶಾಲಾ ಕೆ.ಸಿ ಕುಂದರ್ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ.ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮವನ್ನು ಶೈಕ್ಷಣಿಕ ಪೆÇ್ರೀತ್ಸಾಹಕ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ,ನಾಗರಾಜ್ ಭಟ್, ಪಡುಕರೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್,ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಜಯರಾಮ ಶೆಟ್ಟಿ, ಪ್ರಾಥಮಿಕ ವಿಭಾಗದ ಅಧ್ಯಕ್ಷ ನಾಗರಾಜ್, ಬ್ರಹ್ಮಾವರ ವಲಯ ಸಂಪನ್ಮೂಲ ವ್ಯಕ್ತಿ ಸುರೇಶ್ ಕುಂದರ್ ಉಪಸ್ಥಿತರಿದ್ದರು.
ಮಣೂರು ಫ್ರೌಢಶಾಲಾ ಮುಖ್ಯ ಶಿಕ್ಷಕ ರಾಮದಾಸ ನಾಯಕ್ ಸ್ವಾಗತಿಸಿದರು.ಕ್ಲಸ್ಟರ್ ಮಟ್ಟದ ಸಂಯೋಜಕರಾದ ಸವಿತಾ ಆಚಾರ್ ಪ್ರಾಸ್ತಾವನೆ ಸಲ್ಲಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್ ಹೊಳ್ಳ ವಂದಿಸಿದರು.ಕಾರ್ಯಕ್ರಮವನ್ನು ಶಿಕ್ಷಕ ರಾಜೀವ ನಿರೂಪಿಸಿದರು.ಕೋಟ ಮಣೂರು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶೈಕ್ಷಣಿಕ ಪೆÇ್ರೀತ್ಸಾಹಕ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿ ಶುಭಹಾರೈಸಿದರು. ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ,ನಾಗರಾಜ್ ಭಟ್, ಪಡುಕರೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ ಮತ್ತಿತರರು ಇದ್ದರು.