ಕಿರಿಮಂಜೇಶ್ವರ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು,ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು,ಸಮೂಹ ಸಂಪನ್ಮೂಲ ಕೇಂದ್ರ ಕಿರಿಮಂಜೇಶ್ವರ ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ದಿನಾಂಕ: 12-09-2024 ರಂದು ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗೇಶ್ ನಾಯ್ಕರವರು ಮಾತನಾಡಿ ‘ಪ್ರತಿಭೆಗಳು ಅರಳಲು ಸೂಕ್ತ ವೇದಿಕೆ ಕಲ್ಪಿಸಿಕೊಡುವ ಅವಶ್ಯಕತೆ ಇದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿ ಪ್ರತಿಭೆಗಳಿಗೆ ಪ್ರೋತ್ಸಾಹ ನಿಡೋಣ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರವರು ಮಾತನಾಡಿ ‘ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಈ ಪ್ರತಿಭಾ ಕಾರಂಜಿ ಉತ್ತಮ ಕಾರ್ಯಕ್ರಮ,ನಿಷ್ಪಕ್ಷಪಾತವಾಗಿ ತೀರ್ಪು ನೀಡುವಂತೆ ಕೋರಿಕೊಂಡು ಸೋಲು ಗೆಲುವು ಇವೆರಡನ್ನು ಸಮಾನಾಗಿ ಸ್ವೀಕರಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ನರಸಿಂಹ ದೇವಾಡಿಗ ಅಧ್ಯಕ್ಷರು ಗ್ರಾಮ ಪಂಚಾಯತ್ ನಾವುಂದ,ಶ್ರೀ ಶೇಖರ ಖಾರ್ವಿ ಅಧ್ಯಕ್ಷರು ಗ್ರಾಮ ಪಂಚಾಯತ್ ಕಿರಿಮಂಜೇಶ್ವರ ಇವರು ಮಾತನಾಡಿ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಶುಭ ಹಾರೈಸಿ ಪ್ರಶಂಶಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಕಾರಂಜಿ ನೋಡಲ್ ಮತ್ತು ಇಸಿಒ ಶ್ರೀ ಸತ್ಯನಾ ಕೊಡೇರಿ,ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಶೇಖರ್ ಪೂಜಾರಿ,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೈಂದೂರು ತಾಲೂಕು ಅಧ್ಯಕ್ಷರಾದ ಶ್ರೀ ವಿಶ್ವನಾಥ ಪೂಜಾರಿ,ಕಿರಿಮಂಜೇಶ್ವರದ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀ ಗಣೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು, ಶಿಕ್ಷಕೇತರ ವೃಂದದವರು ಹಾಗೂ 14 ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.ಮುಖ್ಯ ಶಿಕ್ಷಕಿ ಕುಮಾರಿ ದೀಪಿಕಾ ಆಚಾರ್ಯ ಸ್ವಾಗತಿಸಿ,ಸಹ-ಶಿಕ್ಷಕ ಸುಬ್ರಹ್ಮಣ್ಯ ವಂದಿಸಿ,ಸಹ-ಶಿಕ್ಷಕಿ ಶ್ರೀಮತಿ ಅನಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

