27
ತೆಕ್ಕಟ್ಟೆ : ಶಿಕ್ಷಣ ಜೀವನದ ಮೊದಲ ಹೆಜ್ಜೆಯಾಗಿ ಪುಟಾಣಿ ಮಕ್ಕಳಿಗೆ ಅಕ್ಷರಜ್ಞಾನದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಶಾಲೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಪುರೋಹಿತ ಪ್ರಸನ್ನ ಭಟ್ ಅವರ ಪೌರೋಹಿತ್ಯದಲ್ಲಿ ಜ್ಞಾನ ದೇವತೆ ಸರಸ್ವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಸಂಪ್ರದಾಯಬದ್ಧವಾಗಿ ಅಕ್ಷರಾಭ್ಯಾಸ ಮಾಡಿಸಲಾಯಿತು. ಮಕ್ಕಳ ವಿದ್ಯಾಭ್ಯಾಸದ ಶುಭಾರಂಭವನ್ನು ದೇವಿಯ ಆಶೀರ್ವಾದದೊಂದಿಗೆ ಆರಂಭಿಸುವ ಮೂಲಕ ವಿದ್ಯೆಯ ಮಹತ್ವವನ್ನು ಸಾರಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯ ಹರ್ಷ ಕೋಟೇಶ್ವರ ಮಾತನಾಡಿ, ಮಕ್ಕಳ ಭವಿಷ್ಯ ಉಜ್ವಲವಾಗಲಿ ಹಾಗೂ ಶಿಕ್ಷಣದ ಪಯಣ ಯಶಸ್ವಿಯಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

