ಉಡುಪಿ ; ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳು ಇವೆ. ಇವೆಲ್ಲವೂ ಕಲಿಕೆಯಲ್ಲಿ ಮುಂದುವರಿದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತವೆ. ಆದರೆ ಇದಕ್ಕೆ ಸಮಾನಾಂತರವಾಗಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಅವಕಾಶ ಮಾಡಿಕೊಟ್ಟಿರುವುದು ‘ಸ್ನೇಹ’ ಸಂಸ್ಥೆ”
ಉಡುಪಿಯು ಶಿಕ್ಷಣಕ್ಕೆ ವಿಶೇಷವಾದ ಮಹತ್ವ ನೀಡಿಕೊಂಡು ಬಂದಿರುವ ಒಂದು ಜಿಲ್ಲೆ. ಇಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ ಮತ್ತು ವಿದ್ಯಾರ್ಥಿಗಳ ಅಭಿರುಚಿಗೆ ತಕ್ಕ ಶಿಕ್ಷಣದ ವ್ಯವಸ್ಥೆಯನ್ನು ನೋಡಬಹುದು. ಪ್ರತಿಯೊಬ್ಬ ಪೋಷಕರಿಗೆ ತಮ್ಮ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಬೇಕೆಂಬುದು ವಾಸ್ತವ. ಅದರಲ್ಲಿಯೂ ಮಕ್ಕಳು ವೈದ್ಯರಾಗಬೇಕು ಇಲ್ಲವೇ ಇಂಜಿನಿಯರ್ ಆಗಬೇಕು ಅದರೊಂದಿಗೆ ತಮ್ಮ ಮನೆತನದ ಪ್ರತಿಷ್ಠೆ ಹೆಚ್ಚಿಸಿಕೊಳ್ಳಬೇಕೆಂಬ ಬಯಕೆ. ಆದ್ದರಿಂದ ಎಸ್.ಎಸ್.ಲ್.ಸಿ ಯಲ್ಲಿ ಉತ್ತಮ ಅಂಕ ಪಡೆದು ತಾವು ಬಯಸಿದ ಇಲ್ಲವೇ ಹೆತ್ತವರ ಒತ್ತಾಸೆಗೆ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿಗೆ ಪ್ರವೇಶ ಪಡೆದು ಶಿಕ್ಷಣ ಮುಂದುವರಿಸುತ್ತಿರುವುದು ಸಾಮಾನ್ಯವಾಗಿ ಕಾಣಸಿಗುತ್ತದೆ. ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳು ಇವೆ. ಇವೆಲ್ಲವೂ ಕಲಿಕೆಯಲ್ಲಿ ಮುಂದುವರಿದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತವೆ. ಆದರೆ ಇದಕ್ಕೆ ಸಮಾನಾಂತರವಾಗಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಅವಕಾಶ ಮಾಡಿಕೊಟ್ಟಿರುವುದು ಉಡುಪಿಯ ಕಲ್ಸಂಕದಲ್ಲಿರುವ ‘ಸ್ನೇಹ ಟ್ಯುಟೋರಿಯಲ್ ಕಾಲೇಜು