Home » ಕ್ರೀಡಾ ಸಮವಸ್ತ್ರ ವಿತರಣಾ ಕಾರ್ಯಕ್ರಮ
 

ಕ್ರೀಡಾ ಸಮವಸ್ತ್ರ ವಿತರಣಾ ಕಾರ್ಯಕ್ರಮ

by Kundapur Xpress
Spread the love

ಕುಂದಾಪುರ : ನಮ್ಮ ಸಮಾಜವನ್ನು, ದೇಶವನ್ನು ಸಶಕ್ತ ಗೊಳಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ. ಈ ಶಿಕ್ಷಣ ಸಮರ್ಪಕ ಹಾಗೂ ಮತ್ತಷ್ಟು ಪರಿಣಾಮಕಾರಿಯನ್ನಾಗಿಸಲು ವಿದ್ಯಾರ್ಥಿಗಳಿಗೆ ನೀಡುವ ಕೊಡುಗೆಗಳು ಅವರ ಕಲಿಕೆಯಲ್ಲಿ ಮಹತ್ವಪೂರ್ಣ ಸ್ಥಾನ ಪಡೆಯುತ್ತದೆ. ವಿದ್ಯಾರ್ಥಿಗಳು ಕಲಿಕೆ ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ಪ್ರಾಮಾಣಿಕ ಹಾದಿಯಲ್ಲಿ ಸಾಗಿದಾಗ ಬದುಕು ಯಶಸ್ಸಿನ ಪಯಣವಾಗುತ್ತದೆ ತನ್ಮೂಲಕ ಬದುಕು ಸಾರ್ಥಕವಾಗುತ್ತದೆ . ಎಂದು ಶ್ರೀ ವಿಜಯಾನಂದ ಶೆಟ್ಟಿ ಹಳನಾಡು ಪ್ರಥಮ ದರ್ಜೆ ಗುತ್ತಿಗೆದಾರರು ಇವರು ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರದ ಪ್ರಾಯೋಜಕತ್ವ ವಹಿಸಿ, ವಿತರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿ ಶ್ರೀ ಸಾಮ್ರಾಟ್ ಶೆಟ್ಟಿ ಗೌರವಾಧ್ಯಕ್ಷರು ಶಾಲಾ ಅಭಿವೃದ್ಧಿ ಸಮಿತಿ ಇವರ ಅಧ್ಯಕ್ಷತೆಯಲ್ಲಿ ಕ್ರೀಡಾ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜರುಗಿತು.

ಕ್ರೀಡಾ ಸಮವಸ್ತ್ರದ ಪ್ರಾಯೋಜಕತ್ವ ವಹಿಸಿದ ,ಶ್ರೀ ವಿಜಯಾನಂದ ಶೆಟ್ಟಿ ಹಳ್ನಾಡು ಹಾಗೂ ಶ್ರೀ ಸಾಮ್ರಾಟ್ ಶೆಟ್ಟಿ ಹಳ್ನಾಡು ಇವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಿ ಗೌರವಿಸಿ ಸನ್ಮಾನಿಸಲಾಯಿತು.
ವಲಯ ಮಟ್ಟದ ಖೊ ಖೊ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶಾಶ್ವತ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ , ಶ್ರೀ ವಿಜಯಾನಂದ ಶೆಟ್ಟಿ ಹಳ್ನಾಡು ಪ್ರಥಮ ದರ್ಜೆ ಗುತ್ತಿಗೆದಾರರು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪ್ರಕಾಶ್ಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶ್ರೀ ಸುರೇಶ್. ಎಸ್ .ಭಟ್ ಶಿಕ್ಷಕರಾದ ಗೋಪಾಲ್ ವಿಷ್ಣು ಭಟ್ ,ನಿತ್ಯಾನಂದ ಶೆಟ್ಟಿ ಹಳನಾಡು, ಅಜಯ್ ಕುಮಾರ್ ಶೆಟ್ಟಿ, ಅಣ್ಣಪ್ಪ .ಎಂ .ಗೌಡ, ರಜನಿ ಹೆಗಡೆ ,ರತ್ನ, ಕುಮಾರಿ ದಿಶಾ ಭಾಗವಹಿಸಿದ್ದರು. ಶ್ರೀಮತಿ ರಜಿನಿ .ಎಸ್ .ಹೆಗಡೆ ಸ್ವಾಗತಿಸಿ ಸಹ ಶಿಕ್ಷಕ ಸಂತೋಷ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

   

Related Articles

error: Content is protected !!