ಕುಂದಾಪುರ : ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಾದ ಸಂಗೀತ ಸಾಹಿತ್ಯ ನೃತ್ಯ ಕಲೆ ಮುಂತಾದ ಚಟುವಟಿಕೆಗಳಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ವಿದೇಶಗಳಲ್ಲಿ ಇಂದಿಗೂ ಪಠ್ಯಪುಸ್ತಕಗಳ ಜೊತೆಯಲ್ಲಿ ಸಂಗೀತವನ್ನು ಕಡ್ಡಾಯವಾಗಿ ಕಲಿಸಲಾಗುತ್ತದೆ ವಿದ್ಯಾರ್ಥಿಗಳು ತಮ್ಮ ಸ್ವಂತ ಆಸಕ್ತಿ ಮೇಲೆ ಗುರಿ ಸಾಧಿಸಬೇಕೆಂದು ಖ್ಯಾತ ಸಂಗೀತ ನಿರ್ಧೇಶಕರಾದ ರವಿ ಬಸ್ರೂರು ರವರು ನುಡಿದರು
ಅವರು ಸುಜ್ಞಾನ ಎಜುಕೇಶನ್ ಟ್ರಸ್ಟ್ (ರಿ) ಪ್ರಾಯೋಜಕತ್ವದ ಯಡಾಡಿ-ಮತ್ಯಾಡಿಯ ಲಿಟ್ಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಿವಿಧ ಪಠ್ಯೇತರ ಚಟುವಟಿಕೆಯ ಕಾರ್ಯಕ್ರಮವಾದ “ಸುನಾದ ಸಂಗಮ”ವನ್ನು ಉದ್ಘಾಟಿಸಿ ಮಾತನಾಡಿದರು
ಸಮಾರಂಭದ ಅಧ್ಯಕ್ಷತೆಯನ್ನು ಸುಜ್ಞಾನ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ರಮೇಶ ಶೆಟ್ಟಿ ಅವರು ವಹಿಸಿದ್ದರು ವೇದಿಕೆಯಲ್ಲಿ ಸುಜ್ಞಾನ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ ಖಜಾಂಚಿಗಳಾದ ಭರತ್ ಶೆಟ್ಟಿ ಮುಖ್ಯೋಪಾಧ್ಯಾಯರಾದ ಅಗಸ್ಟಿನ್ ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳ ತರಬೇತಿದಾರರು ಉಪಸ್ಥಿತರಿದ್ದರು
ಸರೋಜಿನಿ ಅವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಭರತ್ ಶೆಟ್ಟಿ ಅವರು ಸ್ವಾಗತಿಸಿ ಪ್ರೀತಿ ಸಿ ಯವರು ಧನ್ಯವಾದವಿತ್ತರು
ಇದೇ ಸಂದರ್ಭದಲ್ಲಿ ರವಿ ಬಸ್ರೂರುರವರನ್ನು ಚಂಡೆ ವಾದನದೊಂದಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು