Home » ‘ತ್ರಿತತ್ವ’ ಅಂತರ್ ಕಾಲೇಜು ಮಟ್ಟದ ಫೆಸ್ಟ್
 

‘ತ್ರಿತತ್ವ’ ಅಂತರ್ ಕಾಲೇಜು ಮಟ್ಟದ ಫೆಸ್ಟ್

ತ್ರಿಶಾ ವಿದ್ಯಾ ಕಾಲೇಜು

by Kundapur Xpress
Spread the love

ಉಡುಪಿ : ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ‘ತ್ರಿತತ್ವ – 2023’ ಎನ್ನುವ ಕಾಮರ್ಸ್ ಫೆಸ್ಟ್ ಡಿಸೆಂಬರ್ 2 ಶನಿವಾರದಂದು ಕಾಲೇಜಿನಲ್ಲಿ ನಡೆಯಿತು. ಜ್ಞಾನ ಕೌಶಲ್ಯ ಮತ್ತು ಧೈರ್ಯ ಎನ್ನುವ ಮೂರೂ ತತ್ವದ ಅಡಿಯಲ್ಲಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಡೆಂಟಾ ಕೇರ್ ಉಡುಪಿ ಇದರ ದಂತ ವೈದ್ಯರಾದ ಡಾ. ವಿಜಯೇಂದ್ರ ವಸಂತ್ ಮಾತನಾಡಿ,

” ಜಾಗತೀಕರಣದ ಮೂಲಕ ಕೇವಲ ಪ್ರಪಂಚದ ವಿವಿಧ ವಿಷಯವನ್ನು ಮೊಬೈಲ್ ನಲ್ಲಿ ಪಡೆದುಕೊಳ್ಳುವುದಲ್ಲ. ಅದರಲ್ಲಿರುವ ಒಳ್ಳೆಯ ಅಂಶಗಳನ್ನು ನಮ್ಮ ವೃತ್ತಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು” ಎಂದರು. ಕಾರ್ಯಕ್ರಮದ ಅಧ್ಯಕ್ಷರಾಗಿ ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್, ಗೌರವ ಅತಿಥಿಗಳಾಗಿ ಎಸ್ ವಿ ಎಸ್ ವಿದ್ಯಾವರ್ಧಕ ಸಂಘದ ಸಂಚಾಲಕರಾದ ಕೆ. ಸತ್ಯೇಂದ್ರ ಪೈ ಹಾಗೂ ಸಿದ್ಧಾಂತ್ ಫೌಂಡೇಶನ್ ನ ಟ್ರಸ್ಟಿಯಾದ ನಮಿತಾ ಜಿ ಭಟ್ಉಪಸ್ಥಿತರಿದ್ದರು

ರಾಜ್ಯದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಸಮಗ್ರ ಪ್ರಶಸ್ತಿ ಪ್ರಥಮ ಹಾಗೂ ಎಂ.ಜಿ.ಎಂ ಕಾಲೇಜು ಉಡುಪಿ ಸಮಗ್ರ ಪ್ರಶಸ್ತಿ ದ್ವಿತೀಯವನ್ನು ಗೆದ್ದಿತು.
ಸಮಾರೋಪ ಸಮಾರಂಭದಲ್ಲಿ ಕಾಂತಾರ ಗುರುವ ಖ್ಯಾತಿಯ ನಟ ಸ್ವರಾಜ್ ಶೆಟ್ಟಿ ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ತ್ರಿಶಾ ವಿದ್ಯಾ ಕಾಲೇಜು, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಹಳೆ ವಿದ್ಯಾರ್ಥಿಗಳು, ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ವಿವಿಧ ಕಾಲೇಜಿನ ಸ್ಪರ್ಧಾಳುಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಲೆರೀನಾ ಮತ್ತು ಸಮೀಕ್ಷಾ ನಿರೂಪಿಸಿದರು

   

Related Articles

error: Content is protected !!