-ಕಟಪಾಡಿಯ : ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ (ಐಸಿಎಸ್ಐ) ನಡೆಸುವ ಸಿಎಸ್ಇಇಟಿ ಪರೀಕ್ಷೆಯಲ್ಲಿ ತ್ರಿಶಾ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.
ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್ ಎಂ ಎಸ್ (134), ತ್ರಿಶಾ (127) , ರಮ್ಯಾ ಆರ್ ಶೆಟ್ಟಿ(126), ಡಯಾನ (122), ನೇಹಾ ಕಾಮತ್ (110) ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ .
ಈ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ತ್ರಿಶಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ತ್ರಿಶಾ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್, ತ್ರಿಶಾ ಕ್ಲಾಸಸ್ ಬೋಧಕರಾದ ಸಿಎ ನಾಗೇಂದ್ರ ಭಕ್ತ ಹಾಗೂ ತ್ರಿಶಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.