Home » ತ್ರಿಶಾ ವಿದ್ಯಾ ಪಿ ಯು ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ
 

ತ್ರಿಶಾ ವಿದ್ಯಾ ಪಿ ಯು ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

by Kundapur Xpress
Spread the love

ಕಟಪಾಡಿ : ತ್ರಿಶಾ ವಿದ್ಯಾ ಪಿ ಯು ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮವು ಕಟಪಾಡಿಯ ಎ ಆರ್ ಕಾಮತ್ ಮೆಮೋರಿಯಲ್ ಹಾಲ್ ನಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿ ಎ ಗೋಪಾಲ ಕೃಷ್ಣ ಭಟ್ ಇವರು ವಿದ್ಯಾರ್ಥಿಗಳಿಗೆ ಕಲಿಕೆಯ ಹತ್ತು ಸೂತ್ರಗಳನ್ನು, ಮುಖ್ಯವಾಗಿ ಯೋಜನೆ ಮತ್ತು ಅಭ್ಯಾಸದ ಪ್ರಾಮುಖ್ಯತೆಯನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಕಾಲೇಜಿನ ನಿಯಮ ಮತ್ತು ನಿಬಂಧನೆಗಳನ್ನು ತಿಳಿಸಿದರು.
ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಪ್ರೊ. ಧೀರಜ್ ಬೆಳ್ಳಾರೆ ನಿರೂಪಿಸಿ,, ಇಂಗ್ಲೀಷ್ ಉಪನ್ಯಾಸಕಿಯಾದ ಪ್ರೊ. ನಿಧಿ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಪ್ರೊ. ಸರಿತಾ ಇವರು ವಂದಿಸಿದರು.

 

Related Articles

error: Content is protected !!