ತೆಕ್ಕಟ್ಟೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ವಿಶ್ವವಿನಾಯಕ ಸಿ. ಬಿ. ಎಸ್. ಇ. ಶಾಲೆಯಲ್ಲಿ ವಿವಿಧ ಕರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಕರ‍್ಯಕ್ರಮದ ಅಧ್ಯಕ್ಷತೆ ವಹಿಸಿ ನೆಹರೂರವರ ಭಾವಚಿತ್ರಕ್ಕೆ ಪುಪ್ಷ ನಮನಗಳನ್ನು ಸಲ್ಲಿಸಿ ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿ ಹೇಳಿದರು. ರಾಷ್ಟçದ ಪ್ರಥಮ ಪ್ರಧಾನ ಮಂತ್ರಿ ನೆಹರೂರವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ ಯಶಸ್ಸನ್ನು ಗಳಿಸಬೇಕೆಂದು ಮಕ್ಕಳಿಗೆ ಕರೆ ನೀಡಿದರು. ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳು, ರಾಷ್ಟ್ರ ನಿರ್ಮಾಣ ಯುವ ಪೀಳಿಗೆಯ ಕೈಯಲ್ಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ಹಾಗೂ ಶಿಕ್ಷಕ ವೃಂದದವರಿAದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹಾಗೆಯೇ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ, ವಿದ್ಯಾರ್ಥಿಗಳು, ಅದ್ಯಾಪಕರು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಮೂಲ್ಯ ಹಾಗೂ ಸುರಕ್ಷಾ ಕರ‍್ಯಕ್ರಮ ನಿರೂಪಿಸಿದರು, ಸುಮೇಧಾ ಸ್ವಾಗತಿಸಿದರು, ತೃಪ್ತಿ ವಂದಿಸಿದರು.

