ಕುಂದಾಪುರ : ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲಿನಲ್ಲಿ ಪೂರ್ವ ಪ್ರಾಥಮಿಕ ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಣಿಪಾಲ ಶ್ರೀ ಶಾರದ ಶಿಕ್ಷಕರ ತರಭೇತಿ ಸಂಸ್ಥೆಯ ಮುಖ್ಯಸ್ಥರಾದ ಸುನೀತಾರವರು ಮಾತನಾಡಿ ಬಾಲ್ಯಾವಸ್ಥೆಯ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಹಾಗೂ ಶಿಕ್ಷಕಕರ ಪಾತ್ರ ಮಹತ್ತರವಾಗಿರುತ್ತದೆ ಎಂದು ತಿಳಿಸಿದರು.
ಮೊಬೈಲ್ ಹಾಗೂ ಟಿವಿ ಮಾದ್ಯಮಗಳ ಗೀಳು ಚಿಕ್ಕ ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುವುದನ್ನು ತಪ್ಪಿಸಲು ಪೋಷಕರು ಜಾಗೃತರಾಗಿರಬೇಕೆಂದು ತಿಳಿಸಿದರು. ಮಗುವಿನ ಸೂಕ್ಷ್ಮ ಮನಸ್ಸನ್ನು ಶಿಕ್ಷಕರು ಹಾಗೂ ಪೋಷಕರು ಅರ್ಥೈಸಿಕೊಳ್ಳುವಲ್ಲಿ ಸಮರ್ಥರಾಗಬೇಕೆಂದು ಹೇಳಿದ ಅವರು ಮಕ್ಕಳಿಗೆ ಬಾಲ್ಯಾವಸ್ಥೆಯಿಂದಲೇ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರದ್ದಾಗಿದೆ ಎಂದು ತಿಳಿಸಿದರು.
ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಎಮ್. ಪ್ರಭಾಕರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಶಾಲಾ ಪ್ರಾಂಶುಪಾಲರಾದ ಶ್ರೀ ನಿತಿನ್ ಡಿ’ ಆಲ್ಮೇಡಾರವರು ಶಾಲಾ ಶೈಕ್ಷಣಿಕ ಕಾರ್ಯ ಯೋಜನೆಗಳ ಮಾಹಿತಿಯನ್ನು ನೀಡಿದರು., ಪೋಷಕರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ ಪೋಷಕರ ಸಂವಾದಕ್ಕೆ ಅವಕಾಶ ಮಾಡಿ ಕೊಡಲಾಯಿತು. ಶಿಕ್ಷಕಿಯರಾದ ಜೆನಿಷಾ ಕ್ರಾಸ್ಟೊ ಕಾರ್ಯಕ್ರಮ ನಿರೂಪಿಸಿದರು, ಜೀಬಾ ಪರಿಚಯಿಸಿ ಸ್ವಾಗತಿಸಿದರು, ಹಾಗೂ ಕೃಪಾಶ್ರೀಯವರು ವಂದಿಸಿದರು.