ಕುಂದಾಪುರ : ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಅಂತರಾಷ್ಟ್ರೀಯ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮ್ಯಾನೇಜಿಂಗ್ ಟ್ರಸ್ಟಿಗಳಾದ ಡಾ. ಕುಸುಮಾಕರ ಶೆಟ್ಟಿಯವರು ಹಾಗೂ ಮುಖ್ಯ ಅತಿಥಿಗಳಾದ ದಿನೇಶ್ ರವರು ಯೋಗ ಪ್ರಾತ್ಯಕ್ಷಿಕೆಯನ್ನು ಮಾಡಿ ತೋರಿಸಿದರು.ಮುಖ್ಯ ಅತಿಥಿಗಳಾದ ದಿನೇಶ್‍ರವರು ಮಾತನಾಡಿ ಭಾರತೀಯ ಸಂಸ್ಕ್ರತಿಯ ಅಂಗವಾಗಿರುವ ಯೋಗದಿಂದ ಇಡೀ ವಿಶ್ವವೇ ಪ್ರಯೋಜನವನ್ನು ಪಡೆದುಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯೋಗಾಭ್ಯಾಸವನ್ನು ಮೈಗೂಡಿಸಿಕೊಂಡಲ್ಲಿ ಆರೋಗ್ಯಪೂರ್ಣ ಜೀವನ ನಡೆಸಲು ಅನುಕೂಲವೆಂದು ತಿಳಿಸಿದರು.
ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಥಮ್ ಕಾರ್ಯಕ್ರಮ ನಿರೂಪಿಸಿದರು, ಕುಮಾರಿ ಶ್ರೀವೈಷ್ಣವಿ ಸ್ವಾಗತಿಸಿದರು, ಕುಮಾರಿ ರಚನಾ ವಂದಿಸಿದರು.