ತೆಕ್ಕಟ್ಟೆ : ವಿಶ್ವ ವಿನಾಯಕ ಸಿ.ಬಿ.ಎಸ್‌ಇ ಸ್ಕೂಲ್ ತೆಕ್ಕಟ್ಟೆ ಇಲ್ಲಿನ ಯು.ಕೆ.ಜಿ. ಮಕ್ಕಳ ಗ್ರಾಜ್ಯುಯೇಶನ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅತಿಥಿಗಳಾಗಿ ಆಗಮಿಸಿದ ಶ್ರೀ ಶಾರದ ಕಾಲೇಜು ಬಸ್ರೂರು ಇಲ್ಲಿನ ಉಪನ್ಯಾಸಕರಾದ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಬದುಕನ್ನು ತಾವೇ ರೂಪಿಸಿ ಕೊಳ್ಳಬೇಕು ಹಾಗೆಯೇ ಜೀವನದಲ್ಲಿ ನಾವು ಎಂದೂ ಹಿಂದೇಟನ್ನು ಹಾಕದೇ ಧೈರ್ಯಶಾಲಿಗಳಾಗಿ ಬದುಕಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಹಾಗೂ ಪೋಷಕರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಮಕ್ಕಳ ಪ್ರಾರಂಭಿಕ ಬೆಳವಣಿಗೆ ಹಾಗೂ ಕಲಿಕೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಮಕ್ಕಳ ಸೂಕ್ಷ್ಮ ಮನಸ್ಸಿನ ಬೆಳವಣಿಗೆಗೆ ಉತ್ತಮ ವಾತಾವರಣ ಕಲ್ಪಿಸಿ ಕೊಡುವುದು ಪೋಷಕರ ಕರ್ತವ್ಯವಾಗಿದೆ ಎಂದರು
ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್ ಪ್ರಭಾಕರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಕೋರಿ ಪೋಷಕರ ಸಹಕಾರವನ್ನು ಸ್ಮರಿಸಿದರು
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಾಲಾ ಸಿಬಂದಿಯವರು ಉಪಸ್ಥಿತರಿದ್ದರು. ಸೆಲ್ಫಿ ಕಾರ್ನರ್ ಹಾಗೂ ಎಲ್.ಕೆ.ಜಿ, ಯು.ಕೆ.ಜಿ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಮಾದರಿಗಳ ವಸ್ತು ಪ್ರದರ್ಶನ ವಿಶೇಷ ಆಕರ್ಷಣೆಯಾಗಿತ್ತು.
ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾರವರು ಸ್ವಾಗತಿಸಿ ಪರಿಚಯಿಸಿದರು, ವಿಲಾಸಿನಿ ಶೆಟ್ಟಿ ವಂದಿಸಿದರು, ಹಾಗೂ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.

