ತೆಕ್ಕಟ್ಟೆ: ನವೆಂಬರ್ 1, ವಿಶ್ವ ವಿನಾಯಕ ಸಿಬಿಎಸ್‍ಇ ಸ್ಕೂಲ್‍ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮೇನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡಾಭಿಮಾನವನ್ನು ಬೆಳೆಸಿಕೊಂಡು ಶುದ್ಧವಾದ ಕನ್ನಡ ಭಾಷೆಯನ್ನು ಬಳಸಿ ಕನ್ನಡವನ್ನು ಬೆಳಸಬೇಕು ಎಂದರು. ಶಾಲಾ ಪ್ರಾಂಶುಪಾಲರಾದ ಶ್ರೀ ನಿತಿನ್ ಡಿ ಆಲ್ಮೇಡಾರವರು ಮಾತನಾಡಿ ಕನ್ನಡ ನಾಡು-ನುಡಿ ಹಾಗೂ ಮಾತೃಭಾಷೆಯ ಜೊತೆಗೆ ಇತರ ಭಾಷೆಗಳ ಕುರಿತು ಗೌರವವನ್ನು ಹೊಂದಿರಬೇಕೆಂದು ತಿಳಿಸಿದರು. ಮಾತೃಭಾಷೆಯಾದ ಕನ್ನಡದ ಪದಗಳ ಸ್ಪಷ್ಟ ಉಚ್ಚಾರ ಹಾಗೂ ಬಳಕೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ನೃತ್ಯ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಿದರು. ವಿದ್ಯಾರ್ಥಿಗಳಾದ ವರ್ಷಾ ವಿ. ಶೆಟ್ಟಿ ಸ್ವಾಗತಿಸಿದರು, ರಿದಿತ್ ಶೆಟ್ಟಿ ವಂದಿಸಿದರು, ಪ್ರಥಮ್ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿಯರಾದ ಶ್ರೀಮತಿ ಪ್ರತಿಮಾ ಹಾಗೂ ಶ್ರೀಮತಿ ತ್ರಿವೇಣಿ ಕಾರ್ಯಕ್ರಮ ಸಂಘಟಿಸಿದರು.