Home » ಶಿಕ್ಷಕರ ದಿನಾಚರಣೆ ಆಚರಣೆ
 

ಶಿಕ್ಷಕರ ದಿನಾಚರಣೆ ಆಚರಣೆ

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್

by Kundapur Xpress
Spread the love

ತೆಕ್ಕಟ್ಟೆ: ವಿಶ್ವವಿನಾಯಕ ಸಿಬಿಎಸ್‌ಇ ಸ್ಕೂಲ್‌ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಎಮ್. ಪ್ರಭಾಕರ ಶೆಟ್ಟಿಯವರು ಡಾ. ಸರ್ವಪಲ್ಲಿ ರಾಧಾ ಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು, ಶಿಕ್ಷಕರ ಜವಾಬ್ದಾರಿಯುತ ಸೇವೆ ಉತ್ತಮ ಸಮಾಜ ನಿರ್ಮಾಣಕ್ಕೆ ಮೂಲವಾಗಿದೆ ಎಂದು ತಿಳಿಸಿದರು. ಪ್ರಾಂಶುಪಾಲರಾದ ಶ್ರೀ ನಿತಿನ್ ಡಿ’ ಆಲ್ಮೇಡಾರವರು ಮಾತನಾಡಿ ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು, ವಿದ್ಯಾರ್ಥಿಗಳು ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆದು ಸತ್ಪçಜೆಗಳಾಗಿ ದೇಶ ನಿರ್ಮಾಣ ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.
ವಿದ್ಯಾರ್ಥಿಗಳಾದ ನವಮಿ ಸ್ವಾಗತಿಸಿದರು, ಬಿಂದುಶ್ರೀ ಕಾರ್ಯಕ್ರಮ ನಿರೂಪಿಸಿದರು, ಮಿರ್ಥುಲಾ ವಂದಿಸಿದರು, ಶಿಕ್ಷಕಿಯರಾದ ನಂದಿನಿ, ರಜನಿ ಹಾಗೂ ಶ್ವೇತಾ ಕಾರ್ಯಕ್ರಮ ಸಂಘಟಿಸಿದರು.

 

Related Articles

error: Content is protected !!