16
ಕುಂದಾಪುರ : ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಕುಂದಾಪುರದ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ವಿದ್ಯಾರ್ಥಿ ನರ್ಸಸ್ ಅಸೋಸಿಯೇಷನ್ (SNA) ಸಮಿತಿಯ ವತಿಯಿಂದ 05-06-2026 ರಂದು ಬಸ್ರೂರು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಅಂಗನವಾಡಿ ಶಿಕ್ಷಕಿ ಶ್ರೀಮತಿ ಕಮಲಾ ಅವರು ಸಸಿಯನ್ನು ನೆಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ 5ನೇ ಸೆಮಿಸ್ಟರ್ ಬಿ.ಎಸ್‌ಸಿ. ನರ್ಸಿಂಗ್ ವಿದ್ಯಾರ್ಥಿನಿ ಕುಮಾರಿ ಆಯಿಷಾ ರಫೀದಾ ಅವರು ವಿಶ್ವ ಪರಿಸರ ದಿನದ ಮಹತ್ವದ ಕುರಿತು ಮಾತನಾಡಿದರು.
ಪರಿಸರ ಜಾಗೃತಿಯನ್ನು ಮೂಡಿಸುವ ಹಾಗೂ ಮರ ನೆಡುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಅಂಗನವಾಡಿಯ ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಸಸಿಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಎಸ್‌ಎನ್‌ಎ ಸಮಿತಿಯ ಸದಸ್ಯರು, 5ನೇ ಸೆಮಿಸ್ಟರ್ ಬಿ.ಎಸ್‌ಸಿ. ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಕುಂದಾಪುರದ ಅಧ್ಯಾಪಕರು ಭಾಗವಹಿಸಿದ್ದರು.

