73
ನವದೆಹಲಿ : ಎನ್‌ಡಿಎ, ಇಂಡಿಯಾ ಕೂಟದ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಗೆದ್ದು ಪ್ರಧಾನಿ ಮೋದಿ ಸತತ ಮೂರನೇ ಬಾರಿ ಕೇಂದ್ರದ ಗದ್ದುಗೆ ಹಿಡಿದು ಭರ್ತಿ ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಎನ್‌ಡಿಎ ಸರ್ಕಾರ ಹಾಗೂ ಕಮಲ ಪಾಳಯ 3.0 ಸರ್ಕಾರದ ಸಾಧನೆಗಳನ್ನು ವಿಭಿನ್ನ ಕಾರ್ಯಕ್ರಮಗಳ ಮೂಲಕ ಜನತೆಗೆ ತಲುಪಿಸಲು ಮುಂದಾಗಿದೆ. ಜೊತೆಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬಂದು 11 ವರ್ಷ ಪೂರ್ಣಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಮಹಾ ಜನಸಂಪರ್ಕ ಅಭಿಯಾನ ಆರಂಭಕ್ಕೆ ಬಿಜೆಪಿ ಮುಂದಾಗಿದೆ. ಈ ಪ್ರಕಾರ ಬಿಜೆಪಿ ಸಂಸದರು ವಾರದಲ್ಲಿ ಎರಡು ದಿನ ತಮ್ಮ ಕ್ಷೇತ್ರದಲ್ಲಿ ಪಾದಯಾತ್ರೆ, ಕೈಗೊಳ್ಳಲಿದ್ದಾರೆ

