133
ನವದೆಹಲಿ : ರಿಲಯನ್ಸ್ ಸಂಸ್ಥೆ ಮುಖ್ಯಸ್ಥ, ದೇಶದ ನಂ.1 ಶ್ರೀಮಂತ ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಗುಜರಾತಿನ ಜಾಮ್‌ನಗರದಿಂದ ದ್ವಾರಕಾ ವರೆಗೆ 140 ಕಿ.ಮೀ. ಪಾದಯಾತ್ರೆ ಕೈಗೊಂಡಿದ್ದಾರೆ.
5 ದಿನಗಳ ಹಿಂದೆ ಜಾಮ್‌ನಗರದ ತಮ್ಮ ನಿವಾಸದಿಂದ ಪಾದಯಾತ್ರೆ ಆರಂಭಿಸಿದ್ದು, 3-4 ದಿನಗಳಲ್ಲಿ ಅವರು ದ್ವಾರಕಾ ತಲುಪಿ ಕೃಷ್ಣನ ದರ್ಶನ ಪಡೆಯಲಿದ್ದಾರೆ. ಇದೇ ತಿಂಗಳ 10ರಂದು ಅವರು 30ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಆ ಪ್ರಯುಕ್ತ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಭದ್ರತೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗಬಾರದು ಎಂದು ರಾತ್ರಿ ಹೊತ್ತು ಪಾದಯಾತ್ರೆ ಕೈಗೊಂಡಿದ್ದಾರೆ.

