65
ಪೋರ್ಟ್ ಆಫ್ ಸ್ಪೇನ್ : 5 ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ರಿನಿಡಾಡ್ ಮತ್ತು ಟೊಬಾಗೊ ದೇಶ ಶುಕ್ರವಾರ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೊರೆತ 25ನೇ ಅಂತಾರಾಷ್ಟ್ರೀಯ ಗೌರವ.
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾ ಪ್ರಸಾದ್ -ಬಿಸ್ಪೆಸ್ಟರ್ ಅವರು ಮೋದಿ ಅವರಿಗೆ ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ದಿ ಆರ್ಡರ್ ಆಫ್ ದಿ ರಿಪಬ್ಲಿಕ್ ಆಫ್ ಟ್ರಿನಿಡಾಡ್ ಮತ್ತು ಟೊಬಾಗೊ’ ಪ್ರಶಸ್ತಿ ನೀಡಿದ್ದಾರೆ. ಪ್ರಶಸ್ತಿ ಪಡೆದ ಬಳಿಕ ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದು, 140 ಕೋಟಿ ಭಾರತೀಯರ ಪರವಾಗಿ ನಾನು ಪ್ರಶಸ್ತಿ ಸ್ವೀಕರಿಸುತ್ತೇನೆ’ ಎಂದಿದ್ದಾರೆ. ಗುರುವಾರವಷ್ಟೇ ಘಾನಾ ಸರ್ಕಾರ ಮೋದಿಗೆ ತಮ್ಮ ದೇಶದ ಅತ್ಯುನ್ನತ ಪ್ರಶಸ್ತಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ನೀಡಿತ್ತು

