ವಯನಾಡು : ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿದ್ದು, 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ ತಿಳಿಸಿವೆ
300ಕ್ಕೂ ಹೆಚ್ಚು ಮನೆ ನೆಲಸಮ:
ಮುಂಡಕ್ಕೆ ಮತ್ತು ಚೂರಲ್ಮಾಲಾ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ 300ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. 123 ಶವಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು ಅವುಗಳಲ್ಲಿ 75 ದೇಹಗಳನ್ನಷ್ಟೇ ಗುರುತಿಸಲಾಗಿದೆ. ಮೃತದೇಹಗಳನ್ನು ಮೇಪ್ಪಾಡಿ ಕೌಟುಂಬಿಕ ಆರೋಗ್ಯ ಕೇಂದ್ರ ಮತ್ತು ನೀಲಾಂಬೂರು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ