96
ಬಿಜಾಪುರ : ಛತ್ತೀಸ್‌ಗಢದ ಬಸ್ತಾರ್ ವಲಯದಲ್ಲಿ ಭದ್ರತಾ ಪಡೆಗಳು ಗುರುವಾರ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 30 ಮಾವೋವಾದಿಗಳು ಹತರಾಗಿದ್ದಾರೆ. ಓರ್ವ ಪೊಲೀಸ್ ಸಿಬ್ಬಂದಿ ಕೂಡ ಮೃತಪಟ್ಟಿದ್ದಾರೆ.
ರಾಜ್ಯ ಪೊಲೀಸ್ ಪಡೆಯ ಜಿಲ್ಲಾ ಮೀಸಲು ಕಾವಲು (ಡಿಆರ್‌ಜಿ) ಪಡೆ ಸಿಬ್ಬಂದಿ ಹಾಗೂ ಬಿಎಸ್ಎಫ್ ಜಂಟಿ ಕಾರ್ಯಾಚರಣೆ ನಡೆಸಿ, ಬಿಜಾಪುರ ಜಿಲ್ಲೆಯಲ್ಲಿ 26 ನಕ್ಸಲೀಯರು ಮತ್ತು ಕಂಕರ್ ಜಿಲ್ಲೆಯಲ್ಲಿ ನಾಲ್ವರು ಮಾವೋವಾದಿಗಳನ್ನು ಗುಂಡಿಕ್ಕಿ ಕೊಂದರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜಾಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಗೆ ತಾಗಿಕೊಂಡಿರುವ, ಬಿಜಾಪುರದ ಗಂಗಲೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಗುರುವಾರ ಮುಂಜಾನೆ 7.00ರ ಸುಮಾರಿಗೆ ಕಾರ್ಯಾಚರಣೆ ನಡೆಯಿತು. ಅಪಾರ ಶಸ್ತ್ರಾಸ್ತ್ರ, ಸ್ಫೋಟಕಗಳ ಸಹಿತ ಭದ್ರತಾ ಪಡೆಗಳ ಗುಂಡೇಟಿಗೆ ಬಲಿಯಾದ 26 ನಕ್ಸಲೀಯರ ಕಳೇಬರಗಳನ್ನು ಸ್ಥಳದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ.ಇನ್ನೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಾಲ್ವರು ಮಾವೋವಾದಿಗಳನ್ನು ಹತ್ಯೆಗೈಯಲಾಗಿದೆ

