72
ರಾಯ್ಪುರ : ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಆರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ಅಬುಜ್ಜದ್ ಪ್ರದೇಶದ ಕಾಡಿನಲ್ಲಿ ಮಧ್ಯಾಹ್ನ ಭದ್ರತಾ ಪಡೆಗಳ ಜಂಟಿ ತಂಡಗಳು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆಯಿತು. ಮಧ್ಯಾಹ್ನದಿಂದ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಅನೇಕ ಬಾರಿ ಗುಂಡಿನ ಚಕಮಕಿ ನಡೆಯಿತು. ಇಲ್ಲಿಯವರೆಗೆ, ಎಕೆ-47/ಎಸ್ ಎಲ್‌ಆರ್ ಬಂದೂಕುಗಳು, ಇತರ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳು ಮತ್ತು ದೈನಂದಿನ ಬಳಕೆಯ ವಸ್ತುಗಳ ಜತೆಗೆ ಆರು ಮಾವೋವಾದಿಗಳ ಶವಗಳನ್ನು ಘಟನಾ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.

