Home » ಧರ್ಮಾಧಾರಿತ ಮೀಸಲಿಗೆ ಅವಕಾಶವಿಲ್ಲ
 

ಧರ್ಮಾಧಾರಿತ ಮೀಸಲಿಗೆ ಅವಕಾಶವಿಲ್ಲ

- ದತ್ತಾತ್ರೇಯ ಹೊಸಬಾಳೆ

by Kundapur Xpress
Spread the love

ಬೆಂಗಳೂರು : ದೇಶದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಅವಕಾಶವಿಲ್ಲ. ಮುಖ್ಯವಾಗಿ ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ

ಭಾನುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವ ಕುರಿತು ಎದುರಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಧರ್ಮ ಆಧಾರಿತ ಮೀಸಲಾತಿಯನ್ನು ನ್ಯಾಯಾಲಯ ಒಪ್ಪುವುದಿಲ್ಲ. ಈ ಹಿಂದೆ ಅನೇಕ ರಾಜ್ಯಗಳು ಧರ್ಮಾಧಾರಿತ ಮೀಸಲಾತಿ ತಂದಾಗ ನ್ಯಾಯಾಲಯಗಳು ತಿರಸ್ಕರಿಸಿವೆ. ಎಲ್ಲಕ್ಕಿಂತ ಹೆಚ್ಚಾಗಿ ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದರು.

ರಾಜಕೀಯ ಪಕ್ಷಗಳು ಚುನಾವಣೆ ಸಂದ ರ್ಭದಲ್ಲಿ ಈ ಮೀಸಲಾತಿ ಘೋಷಿಸುತ್ತವೆ. ನಂತರ ಅದು ಬದಿಗೆ ಸರಿಯುತ್ತದೆ. ಇಂತಹ ರಾಜಕೀಯ ನಡೆಗಳು ಅನುಸರಿಸುವವರು ಸಂವಿಧಾನ ರಚನೆಕಾರರ ಉದ್ದೇಶಕ್ಕೆ ವಿರುದ್ದವಾಗಿ ಹೋಗುತ್ತಿದ್ದಾರೆ ಎಂದೇ ಅರ್ಥ. ಈ ವಿಚಾರ ಮತ್ತು ಜಾತಿಗಣತಿ ಸಂಬಂಧ ಸಂಘವು ಅನೇಕ ಬಾರಿ ತನ್ನ ಅಭಿಪ್ರಾಯ ಹೇಳಿದ್ದು, ಮತ್ತೆ ಮತ್ತೆ ಹೇಳುವ ಅಗತ್ಯವಿಲ್ಲ ಎಂದು ತಿಳಿಸಿದರು.

ವಕ್ಸ್ ಕಾಯ್ದೆ ರದ್ದಿಗೆ ಹಿಂದೂ ಸಂಘಟನೆಗಳ ಆಗ್ರಹದ ಬಗ್ಗೆ ಪ್ರತಿಕ್ರಿಯಿಸಿ, ವಕ್ಸ್ ನಿಂದ ರೈತರ ಭೂಮಿ ಒತ್ತುವರಿ ಮಾಡಿರುವು ದರಿಂದ ಅನೇಕ ರೈತರು ಸಂತ್ರಸ್ತರಾಗಿದ್ದಾರೆ. ಕೇಂದ್ರ ಸರ್ಕಾರ ಈ ಸಮಸ್ಯೆ ಪರಿಹಾರಕ್ಕಾಗಿ ಕೆಲಸ ಮಾಡುತ್ತಿದೆ. ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು ಎಂದರು.

 

Related Articles

error: Content is protected !!