ಶ್ರೀನಗರ : ಕೇಂದ್ರಾಡಳಿತ ಪ್ರದೇಶ ಜಮ್ಮು- ಕಾಶ್ಮೀರದಲ್ಲಿ ಸೇನಾ ವಾಹನಗಳ ಅಪಘಾತ ಪ್ರಕರಣಗಳು ಮುಂದುವರಿದಿದೆ. ಕಳೆದ ವಾರವಷ್ಟೇ ಸೇನಾ ವಾಹನವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕರ್ನಾಟಕದ ನಾಲ್ವರು ಸೇರಿದಂತೆ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದರು. ಇದೀಗ ಬಂಡಿಪೋರಾ ಜಿಲ್ಲೆಯಲ್ಲಿ ಮತ್ತೆ ಅಂತಹುದೇ ಅಪಘಾತ ಸಂಭವಿಸಿದೆ. ಸೇನಾ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ
ಪ್ರತಿಕೂಲ ಹವಾಮಾನ ಮತ್ತು ಅಸ್ಪಷ್ಟ ಗೋಚರತೆಯಿಂದಾಗಿ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಪರಿಣಾಮ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ