138
ನವದೆಹಲಿ :ಕನ್ನಡ ಚಿತ್ರ ರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರಾಂತ ನಟ ಅನಂತನಾಗ್ ಅವರಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರತಿಷ್ಠಿತ ‘ಪದ್ಮಭೂಷಣ’ ಗೌರವ ಪ್ರದಾನ ಮಾಡಿದರು.
ಇದೇ ವೇಳೆ ಸಂಗೀತ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಬೆಂಗಳೂರಿನ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

