150
ಮುಂಬೈ : 1960-70ರ ದಶಕದಲ್ಲಿ ದೇಶಭಕ್ತಿ ಆಧರಿತ ಚಿತ್ರಗಳ ಮೂಲಕ ದೇಶಾದ್ಯಂತ ಮನೆಮಾತಾಗಿದ್ದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಟ ಮನೋಜ್ ಕುಮಾರ್ (87) ಶುಕ್ರವಾರ ಇಲ್ಲಿ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಸುಕಿನ 3.30ರ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ. ಖ್ಯಾತ ನಟನ ನಿಧನಕ್ಕೆ ಪ್ರಧಾನಿ ಮೋದಿ ಆದಿಯಾಗಿ ಗಣ್ಯರು, ಚಲನಚಿತ್ರರಂಗದ ಹಿರಿ-ಕಿರಿಯ ನಟರು ಕಂಬನಿ ಮಿಡಿದಿದ್ದಾರೆ.

