Home » ಅಗ್ನಿ-5 ಕ್ಷಿಪಣಿ ಪರೀಕ್ಷೆ ಯಶಸ್ವಿ
 

ಅಗ್ನಿ-5 ಕ್ಷಿಪಣಿ ಪರೀಕ್ಷೆ ಯಶಸ್ವಿ

by Kundapur Xpress
Spread the love

ಹೊಸದಿಲ್ಲಿ : ಭಾರತವು ಬುಧವಾರ ಅಗ್ನಿ- 5 ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಒಡಿಶಾದ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ಕ್ಷಿಪಣಿಯ ಪರೀಕ್ಷೆ ನಡೆಸಲಾಗಿದ್ದು, ಎಲ್ಲ ಕಾರ್ಯಾಚರಣೆ ಮತ್ತು ತಾಂತ್ರಿಕ ಅಂಶಗಳಲ್ಲಿ ಯಶಸ್ವಿಯಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ- 5 ಅನ್ನು ಆ.20ರಂದು ಒಡಿಶಾದ ಚಂಡಿಪುರದ ಇಂಟಿಗ್ರೆಟೆಡ್ ಟೆಸ್ಟ್ ರೇಂಜ್‌ನಿಂದಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ಅದು ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ. ಹಾಗೆಯೇ, ಇದನ್ನು ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್‌ನ ಆಶ್ರಯದಲ್ಲಿ ನಡೆಸಲಾಯಿತು ಎಂದು ಅದು ಹೇಳಿದೆ.

 

Related Articles

error: Content is protected !!