Home » ಏರಿಂಡಿಯಾ ವಿಮಾನದ ಬ್ಲ್ಯಾಕ್‌ಬಾಕ್ಸ್‌ಗೆ ಭಾರೀ ಹಾನಿ
 

ಏರಿಂಡಿಯಾ ವಿಮಾನದ ಬ್ಲ್ಯಾಕ್‌ಬಾಕ್ಸ್‌ಗೆ ಭಾರೀ ಹಾನಿ

by Kundapur Xpress
Spread the love

ನವದೆಹಲಿ : ಕಳೆದ ವಾರ ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಬ್ಲ್ಯಾಕ್ ಬಾಕ್ಸ್ ಭಾರೀ ಪ್ರಮಾಣದಲ್ಲಿ ಹಾನಿಗೊಳಗಾ ಗಿದೆ. ಈ ಹಿನ್ನೆಲೆಯಲ್ಲಿ ಅದರೊಳಗಿನ ಮಾಹಿತಿ ಹೊರತೆಗೆಯಲು ಅದನ್ನು ಅಮೆರಿಕಕ್ಕೆ ಕಳುಹಿಸಿಕೊಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಕಳೆದ ವರ್ಷ ದೆಹಲಿಯಲ್ಲಿ ಬ್ಲ್ಯಾಕ್ ಬಾಕ್ಸ್ ಮಾಹಿತಿ ಹೊರತೆಗೆಯುವ ಪ್ರಯೋಗಾಲಯವನ್ನು ಸರ್ಕಾರ ಸ್ಥಾಪಿಸಿತ್ತು. ಆದರೆ ಅಹಮದಾಬಾದ್ ವಿಮಾನ ದುರಂತದ ವೇಳೆ ಅದರಲ್ಲಿದ್ದ 1.25 ಲಕ್ಷ ಲೀಟರ್‌ ಪೆಟ್ರೋಲ್ ದಹನಗೊಂಡು ಸೃಷ್ಟಿಯಾದ ಭಾರೀ ಉಷ್ಣತೆಯಿಂದಾಗಿ ಬ್ಲ್ಯಾಕ್‌ಬಾಕ್ಸ್‌ಗೆ ಹಾನಿಯಾಗಿದೆ. ಹೀಗಾಗಿ ಭಾರತದಲ್ಲಿ ಡೇಟಾ ಮರು ಸಂಗ್ರಹಣೆ ಕಷ್ಟ ಎನ್ನುವ ಕಾರಣಕ್ಕೆ ಅಮೆರಿಕಕ್ಕೆ ಕಳಿಸಲು ಚಿಂತನೆ ನಡೆದಿದೆ. ಇದರಲ್ಲಿ ವಿಮಾನ ಪತನಕ್ಕೆ ಕಾರಣವಾದ ತಾಂತ್ರಿಕ ಕಾರಣ ದಾಖಲಾಗಿರುತ್ತದೆ.

 

Related Articles

error: Content is protected !!