231
ಅಹಮದಾಬಾದ್ : 242 ಪ್ರಯಾಣಿಕರಿದ್ದ ವಿಮಾನವೊಂದು ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿ ನಗರ ಪ್ರದೇಶದಲ್ಲಿ ಪತನವಾಗಿದ್ದು 210 ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏರ್ ಇಂಡಿಯಾ ವಿಮಾನದಲ್ಲಿ 230 ಪ್ರಯಾಣಿಕರು 10 ಸಿಬ್ಬಂದಿ ಹಾಗೂ ಇಬ್ಬರು ಪೈಲಟ್ ಗಳು ಪ್ರಯಾಣಿಸುತ್ತಿದ್ದರು
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ


